ಪಠ್ಯದ ಜತೆ ಪಠ್ಯೇತರ ಚಟುವಟಿಕೆಯಲ್ಲೂ ಪಾಲ್ಗೊಳ್ಳಿ

ತಾಲೂಕು ಮಟ್ಟದ ಪ್ರೌಢಶಾಲೆ ವಿಭಾಗದಿಂದ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಡಾ.ಲಿಂಗರಾಜು ಇತರರು ಇದ್ದರು.
ತಾಲೂಕು ಮಟ್ಟದ ಪ್ರೌಢಶಾಲೆ ವಿಭಾಗದಿಂದ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಡಾ.ಲಿಂಗರಾಜು ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಡಾ.ಲಿಂಗರಾಜು ಕಿವಿಮಾತು
ಅರಸೀಕೆರೆ ಗ್ರಾಮಾಂತರ: ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದರೆ ಸಾಲದು ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಲಿಂಗರಾಜು ಶನಿವಾರ ಹೇಳಿದರು.
ತಾಲೂಕು ಮಟ್ಟದ ಪ್ರೌಢಶಾಲೆ ವಿಭಾಗದಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಅವರು ಮಾತನಾಡಿದರು.
ಪಠ್ಯಪುಸ್ತಕದಲ್ಲಿ ಕಲಿಯುವ ವಿದ್ಯೆ ನಮ್ಮ ಜ್ಞಾನಾರ್ಜನೆ ಹೆಚ್ಚಿಸಿದರೆ. ಪಠ್ಯೇತರ ಚಟುವಟಿಕೆಗಳಲ್ಲಿ ಇರುವ ಆಸಕ್ತಿ ನಮ್ಮ ಬದುಕನ್ನು ವಿಕಾಸಗೊಳಿಸುತ್ತದೆ. ಕಲೆ, ಸಾಹಿತ್ಯ, ಸಂಗೀತ, ಜ್ಞಾನ, ವಿಜ್ಞಾನ ಅಥವಾ ಉತ್ತಮ ಕ್ರೀಡಾಪಟು ಯಾವುದೇ ಆಗಿರಲಿ ಸೂಕ್ತ ಮಾರ್ಗದರ್ಶನದೊಂದಿಗೆ ನಿರಂತರ ಅಭ್ಯಾಸ ಮಾಡುವುದರಿಂದ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಆದಿಚುಂಚನಗಿರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಶಿಕ್ಷಣ ಮಾತ್ರ ದೊರೆಯುವುದಿಲ್ಲ. ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳಿಗೆ ಇರುವ ಆಸಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ ಜತೆಗೆ ವೇದಿಕೆ ಒದಗಿಸಿಕೊಡುವ ಕೆಲಸ ಮಾಡಲಾಗುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹೆಸರು ಮಾಡುತ್ತಿರುವುದು ಸಂತಸ ವಿಷಯವಾಗಿದೆ ಎಂದರು.
ಪ್ರಶಸ್ತಿಗೆ ಭಾಜನರಾದ ವಿದ್ಯಾರ್ಥಿಗಳಾದ ಸ್ವರ್ಣಗೌರಿ, ರಾಬಿಯಾ, ಮಿನ್ಹಾಜ್, ಸಯೀದ್ ಸಾಫಿಯಾ, ಆಫಿಯಾ, ಉಸ್ಮಾ, ಸಯೀದ್ ಝೈನಬ್ ಅವರನ್ನು ಸನ್ಮಾನಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net