ಜನಗಣತಿ ಪಾಲ್ಗೊಂಡು ಅಭಿವೃದ್ಧಿಗೆ ಸಹಕರಿಸಿ

 ಪಟ್ಟಣದ ಮಿನಿವಿಧಾನಸೌಧ ಆವರಣದ ಸಭಾಂಗಣದಲ್ಲಿ ಶಾಸಕ ಸಿಮೆಂಟ್ ಮಂಜು ಪತ್ರಿಕಾಗೋಷ್ಠಿ ನಡೆಸಿ ಜನಗಣತಿ ಕುರಿತು ಮಾತನಾಡಿದವರು.
ಪಟ್ಟಣದ ಮಿನಿವಿಧಾನಸೌಧ ಆವರಣದ ಸಭಾಂಗಣದಲ್ಲಿ ಶಾಸಕ ಸಿಮೆಂಟ್ ಮಂಜು ಪತ್ರಿಕಾಗೋಷ್ಠಿ ನಡೆಸಿ ಜನಗಣತಿ ಕುರಿತು ಮಾತನಾಡಿದವರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿಮೆಂಟ್ ಮಂಜು ಮನವಿ
ಆಲೂರು: ದೇಶಾದ್ಯಂತ ಮಹತ್ವದ ಜನಗಣತಿ ಆರಂಭವಾಗಿದ್ದು, ಸ್ವಯಂ ಗಣತಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯವಾಗಿದೆ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಂಪನ್ಮೂಲದ ಸಮರ್ಪಕ ಹಂಚಿಕೆಗೆ ದಾರಿ ತೋರುತ್ತದೆ. ಹಾಗಾಗಿ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ ಮೂಲಕ ಅಪ್‌ಲೋಡ್ ಮಾಡಬಹುದು. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ. ಮೊಬೈಲ್ ಫೋನ್ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ ಎಂದು ಪಟ್ಟಣದ ಮಿನಿವಿಧಾನಸೌಧ ಆವರಣದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜನಗಣತಿಯಲ್ಲಿ ಪಾಲ್ಗೊಳ್ಳುವುದು ಕೇವಲ ಕರ್ತವ್ಯವಲ್ಲ. ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವುದು ಕೂಡ. ಇಂದು ನೀವು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು, ಸೇವೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ತಿಳಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ಮಾತನಾಡಿ, ನಾಗರಿಕರು ಹೊಸದಾಗಿ ಪರಿಚಯಿಸಲಾದ ಸ್ವಯಂ ಗಣತಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಸಂಖ್ಯೆ ಮತ್ತು ಒಟಿಪಿ ಬಳಸಿ ಈ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು. ಏ.16 ರಿಂದ ಮೇ 15ರವರೆಗೆ ಎರಡನೇ ಹಂತ ನಡೆಯಲಿದ್ದು, ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ನಡೆಸಲಿದ್ದಾರೆ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಶರ್ಮ, ರಮೇಶ್, ಮಧು ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net