ಆರೋಗ್ಯದತ್ತ ಹೆಚ್ಚಿನ ಗಮನಹರಿಸಿ

ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಸಮೀಪವಿರುವ ಶ್ರೀ ಸತ್ಯಸಾಯಿ ಸತ್ಯ ನಿಕೇತನಂನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ನೇತ್ರ ತಪಾಸಣೆ ಉಚಿತ ಶಿಬಿರವನ್ನು ತಾರಾಮಣಿ ಸುರೇಶ್ ಉದ್ಘಾಟಿಸಿದರು. ಡಾ.ಚಂದ್ರಮೌಳಿ, ಆದರ್ಶ್, ಪ್ರಶಾಂತ್ ಇತರರು ಇದ್ದರು.
ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಸಮೀಪವಿರುವ ಶ್ರೀ ಸತ್ಯಸಾಯಿ ಸತ್ಯ ನಿಕೇತನಂನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ನೇತ್ರ ತಪಾಸಣೆ ಉಚಿತ ಶಿಬಿರವನ್ನು ತಾರಾಮಣಿ ಸುರೇಶ್ ಉದ್ಘಾಟಿಸಿದರು. ಡಾ.ಚಂದ್ರಮೌಳಿ, ಆದರ್ಶ್, ಪ್ರಶಾಂತ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • attention to health
ಬೇಲೂರು: ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಜ್ಞಾನಕ್ಕೆ ಸೀಮಿತರಾಗದೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು. ಇದರ ಜತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸುವುದು ಅಗತ್ಯವಾಗಿದ್ದು, ಇಂದಿನ ಬದಲಾದ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯಿಂದ ಆರೋಗ್ಯ ಸಮಸ್ಯೆ ಕಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ಬೇಲೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ತಾರಾಮಣಿ ಸುರೇಶ್ ತಿಳಿಸಿದರು.
ತಾಲೂಕಿನ ಅಜ್ಜೇನಹಳ್ಳಿ ಸಮೀಪವಿರುವ ಶ್ರೀಸತ್ಯಸಾಯಿ ಸತ್ಯ ನಿಕೇತನಂನಲ್ಲಿ ಭಾನುವಾರ ಬೇಲೂರಿನ ಲಯನ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ನೇತ್ರ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿದರು.
ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ಸಂಪೂರ್ಣ ಸಹಕಾರ ನೀಡಿದ್ದರಿಂದ ಶಿಬಿರ ಯಶಸ್ವಿಯಾಗಿ ಜರುಗಲು ಸಾಧ್ಯವಾಯಿತು. ಇದಕ್ಕಾಗಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹಾಗೂ ಶಿಕ್ಷಣದೊಂದಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗಬೇಕು ಎಂದರು.
ಲಯನ್ಸ್ ಮಾಜಿ ಅಧ್ಯಕ್ಷ ಹಾಗೂ ಕಾವೇರಿ ಕ್ಲಿನಿಕ್ ವೈದ್ಯಾಧಿಕಾರಿ ಡಾ.ಚಂದ್ರಮೌಳಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಣ ಸಂಪಾದನೆಗೆ ಎಷ್ಟು ಮಹತ್ವ ನೀಡುತ್ತೇವೆಯೋ ಆರೋಗ್ಯಕ್ಕೂ ಅಷ್ಟೇ ಆದ್ಯತೆ ನೀಡಬೇಕು ಎಂದರು.
ಇದೇ ಸಂದರ್ಭ ಶಿಬಿರದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೇತ್ರ ತಪಾಸಣೆ ಮಾಡಿಸಿಕೊಂಡರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಆದರ್ಶ್, ಖಜಾಂಚಿ ಪ್ರಶಾಂತ್, ಶ್ರೀಸತ್ಯಸಾಯಿ ಸತ್ಯ ನಿಕೇತನಂ ವಿದ್ಯಾ ಸಂಸ್ಥೆಯ ರಾಜೇಶ್, ಮುಖ್ಯೋಪಾಧ್ಯಯ ಕಾಶಿನಾಥ್, ಶಿಕ್ಷಕರಾದ ಛಾಯಾಪುತ್ರ, ಲಿಜೇಶ್, ಶರಣ ಸಾಹಿತ್ಯ ಪರಿಷತ್‌ನ ಹೆಬ್ಬಾಳು ಹಾಲಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net