ಹುತಾತ್ಮರಿಗೆ ಗೌರವ ಸಲ್ಲಿಕೆ

ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಪಟ್ಟಣದ ಕೆಂಪೇಗೌಡರ ಪ್ರತಿಮೆ ಮುಂಭಾಗ ಮೇಣದ ಬತ್ತಿ ಹಚ್ಚಿ ಹುತಾತ್ಮ ಯೋದರಿಗೆ ಗೌರವ ಸಲ್ಲಿಸಿದರು.
ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಪಟ್ಟಣದ ಕೆಂಪೇಗೌಡರ ಪ್ರತಿಮೆ ಮುಂಭಾಗ ಮೇಣದ ಬತ್ತಿ ಹಚ್ಚಿ ಹುತಾತ್ಮ ಯೋದರಿಗೆ ಗೌರವ ಸಲ್ಲಿಸಿದರು.
Published on
ಬೇಲೂರು: ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಪಟ್ಟಣದ ಕೆಂಪೇಗೌಡರ ಪ್ರತಿಮೆ ಮುಂಭಾಗ ಭಾನುವಾರ ರಾತ್ರಿ ಮೇಣದ ಬತ್ತಿಗಳನ್ನು ಹಚ್ಚಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಮೂಲಕ ಕಾರ್ಗಿಲ್ ವಿಜಯ್ ದಿವಸ್ ಆಚರಿಸಿದರು.
ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಎಸ್.ಎಂ.ರಾಜು ಮಾತನಾಡಿ, ಗಡಿಯಲ್ಲಿ ಸೈನಿಕರು ತಮ್ಮ ಜೀವ ಪಣಕ್ಕಿಟ್ಟು ದೇಶ ಸೇವೆ ಮಾಡುತ್ತಿರುವುದರಿಂದಲೇ ದೇಶದೊಳಗಿರುವ ನಾವು ನೆಮ್ಮದಿಯಾಗಿ ಬದುಕಿದ್ದೇವೆ. ಅಲ್ಲದೆ 27 ವರ್ಷಗಳ ಹಿಂದೆ ಭಾರತ-ಪಾಕಿಸ್ತಾನ ನಡುವೆ ಕಾರ್ಗಿಲ್‌ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ತಾನ ಸೈನ್ಯದ ವಿರುದ್ಧ ಆಪರೇಷನ್ ವಿಜಯದ ಮೂಲಕ ಎದುರಾಳಿ ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿ ಕಾರ್ಗಿಲ್ ಅನ್ನು ವಶಕ್ಕೆ ಪಡೆದು ವಿಜಯ ಪತಾಕೆ ಹಾರಿಸಿದರು. ಆದರೆ ಈ ಯುದ್ಧದಲ್ಲಿ ನಮ್ಮ 527 ಸೈನಿಕರು ಹುತಾತ್ಮರಾಗುವ ಮೂಲಕ ಭಾರತಕ್ಕೆ ಐತಿಹಾಸಿಕ ಗೆಲುವು ತಂದು ಕೊಟ್ಟರು. ಈ ಹಿನ್ನೆಲೆಯಲ್ಲಿ ನಮ್ಮ ಸಂಘಟನೆಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಮೇಣದ ಬತ್ತಿಗಳನ್ನು ಹಚ್ಚಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದರು.
ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್, ತಾಲೂಕು ಕಾರ್ಯಾಧ್ಯಕ್ಷ ಬಿ.ಎಲ್.ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಉಪಾಧ್ಯಕ್ಷ ವಸಂತ ಕುಮಾರ್, ಯುವ ಘಟಕದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಕೋಟೆ ಕುಮಾರ್, ನಗರಾಧ್ಯಕ್ಷ ಜಯರಾಮ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net