ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ರೂಪಿಸಿ

ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ರಾಜ್ ಸೂಚನೆ
  • ಪೂರ್ವಭಾವಿ ಸಭೆ
ಹಾಸನ: ಜನವರಿ 26 ರಂದು ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ರಾಜ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು, ಎಲ್ಲ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಅಂದು ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ ತಮ್ಮ ಸಿಬ್ಬಂದಿ ಜತೆ ಕಡ್ಡಾಯವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಕಾರ್ಯಕ್ರಮಕ್ಕೆ ಹಾಜರಾಗದ ಅಧಿಕಾರಿ, ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಗಣರಾಜ್ಯೋತ್ಸವ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಶಿಷ್ಟಾಚಾರ ಪಾಲನೆ, ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಛತೆ, ಎಲ್ಲ ಕಚೇರಿಗಳಲ್ಲಿ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ-ನಾಡಗೀತೆ ಪಥಸಂಚಲನ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಪೊಲೀಸ್ ಇಲಾಖೆ, ಅಬ್ಬಕಾರಿ ಇಲಾಖೆ, ಅಗ್ನಿಶಾಮಕ ದಳ ಸೇರಿದಂತೆ ಕವಾಯತು ತಂಡಗಳ ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳವಂತೆ ತಿಳಿಸಿದವರು.
ಪರೇಡ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಪೂರ್ವಾಭ್ಯಾಸ ಸಮಯದಲ್ಲಿ ಕುಡಿಯುವ ನೀರು ಹಾಗೂ ಆಹಾರ ಒದಗಿಸುವಂತೆ ಹಾಸನ ಮಹಾನಗರ ಪಾಲಿಕೆ ಆಯುಕ್ತರಿಗೆ ಹಾಗೂ ಹಾಸನ ಹಾಲು ಒಕ್ಕೂಟ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net