ವಿಶ್ವ ಪರಿಸರ ದಿನದ ಅಂಗವಾಗಿ ಶುಕ್ರವಾರ ಹಾಸನ ತಾಲೂಕು ಶಾಂತಿಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಪಿಎಸ್ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮಕ್ಕಳೊಂದಿಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಗಿಡಗಳು ಮನುಕುಲಕ್ಕೆ ಅಮೂಲ್ಯವಾದ ಆಸ್ತಿಯಾಗಿದೆ, ಶುದ್ಧ ಗಾಳಿ, ಮಳೆ ಹಾಗೂ ಜೀವ ವೈವಿಧ್ಯತೆ ಸಂರಕ್ಷಣೆಗೆ ಪ್ರಮುಖ ಪಾತ್ರವಹಿಸುತ್ತವೆ ಎಂದು ತಿಳಿಸಿದರು.