ಪಿಎಲ್‌ಡಿ ಬ್ಯಾಂಕ್ ಸರ್ವಸದಸ್ಯರ ಸಭೆ ಇಂದು

ಮಹಾಸಭೆ
ಮಹಾಸಭೆ
Published on

ಅರಸೀಕೆರೆ: ನಗರದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಪಿಎಲ್‌ಡಿ ಬ್ಯಾಂಕಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಆ.20ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಪಿಎಲ್‌ಡಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ, ಬೇಲೂರು ಶಾಸಕ ಎಚ್.ಕೆ.ಸುರೇಶ್ ಮಹಾಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬ್ಯಾಂಕ್ ಅಧ್ಯಕ್ಷ ಶಶಿವಾಳ ಗಂಗಾಧರಪ್ಪ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷ ತಿಪ್ಪನಹಳ್ಳಿ ಪರಮೇಶ್ವರಪ್ಪ ಸೇರಿದಂತೆ ನಿರ್ದೇಶಕರು ಹಾಗೂ ಷೇರುದಾರ ರೈತರು ಪಾಲ್ಗೊಳ್ಳುವರು ಎಂದು ವ್ಯವಸ್ಥಾಪಕ ಚಂದ್ರು ಬಾಲನಾಯ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net