ಕಾಫಿ ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಅದ್ದೂರಿ ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬೇಲೂರು ತಾಲೂಕಿನ ವಿವಿಧ ಗ್ರಾಮಗಳ ಕಾಫಿ ತೋಟಗಳಲ್ಲಿ ಮತ್ತು ಮನೆಯ ಆವರಣದಲ್ಲಿ ಒಣಗಲು ಹಾಕಿದ್ದ ಕಾಫಿ ಮತ್ತು ಗೋಡೌನ್‌ಗಳಲ್ಲಿ ಇಟ್ಟಿದ್ದ ಕಾಫಿ ಕಳ್ಳತನ ಹೆಚ್ಚಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದರೆ ಈಗಂತೂ ಎಲ್ಲಿ ನೋಡಿದರೂ ಕಾಫಿ ಕಳ್ಳತನವಾಗುತ್ತಿರುವುದರಿಂದ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸಿ ರಾತ್ರಿ ಬೀಟ್ ಹೆಚ್ಚಿಸುವಂತೆ ಹಾಗೂ ಕೆಲವೊಂದು ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವಂತೆ ಮತ್ತು ಕಾಡಾನೆ ಸಮಸ್ಯೆ ಬಗೆಯೂ ಗಮನ ಹರಿಸುವಂತೆ ಮನವಿ ಮಾಡಿದರು.