ಬಡತನ, ಅನಕ್ಷರತೆ ಸಾಮಾಜಿಕ ನ್ಯಾಯಕ್ಕಿರುವ ಸವಾಲುಗಳು

ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಣೆ  ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ವೈ.ಎಸ್.ಸಿದ್ದೇಗೌಡ, ಎನ್.ಎಚ್, ಪ್ರಕಾಶ್, ಡಾ.ಎಚ್.ಎಂ.ಮಹೇಶ್ ಇದ್ದರು.
ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಣೆ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ವೈ.ಎಸ್.ಸಿದ್ದೇಗೌಡ, ಎನ್.ಎಚ್, ಪ್ರಕಾಶ್, ಡಾ.ಎಚ್.ಎಂ.ಮಹೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಉಪನ್ಯಾಸಕ ಎನ್.ಎಚ್.ಪ್ರಕಾಶ್ ಅಭಿಮತ
ಬೇಲೂರು : ಪಟ್ಟಣ ಸಮೀಪದ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯುಎಸಿ ಮತ್ತು ಸಮಾಜಶಾಸ್ತ್ರ ವಿಭಾಗದಿಂದ ಶನಿವಾರ ವಿಶ್ವ ಸಾಮಾಜಿಕ ನ್ಯಾಯ ದಿನ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮಾಜಶಾಸ್ತ್ರ ಉಪನ್ಯಾಸಕ ಎನ್.ಎಚ್.ಪ್ರಕಾಶ್ ಮಾತನಾಡಿ, ಜಾತಿ ವ್ಯವಸ್ಥೆ, ಬಡತನ, ಲಿಂಗ ತಾರತಮ್ಯ, ಅನಕ್ಷರತೆ ಸಾಮಾಜಿಕ ನ್ಯಾಯಕ್ಕಿರುವ ಸವಾಲುಗಳಾಗಿದ್ದು, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಇರುವ ಸೌಲಭ್ಯಗಳು ಹೇಗೆ ಸಾಮಾಜಿಕ ನ್ಯಾಯ ಪಡೆಯಲು ಸಹಕಾರಿಯಾಗಿವೆ ಎಂದು ತಿಳಿಸಿದರು.
ಅವಕಾಶಗಳು ಮನೆಯ ಬಾಗಿಲಿಗೆ ಬರುವುದಿಲ್ಲ. ಅವುಗಳನ್ನು ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮದ ಮೂಲಕ ಪಡೆಯಬೇಕಿದೆ. ಮಹಿಳಾ ಸಬಲೀಕರಣವು ಸಾಮಾಜಿಕ ನ್ಯಾಯ ಪಡೆಯಲು ಇರುವ ಅತಿ ಉನ್ನತ ಮಾರ್ಗವಾಗಿದ್ದು ವಿದ್ಯಾರ್ಥಿನಿಯರು ತಮ್ಮ ಶೈಕ್ಷಣಿಕ ಸಾಧನೆ ಮೂಲಕ ಇದನ್ನು ಪಡೆಯಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೈ.ಎಸ್.ಸಿದ್ದೇಗೌಡ, ವಿದ್ಯಾರ್ಥಿಗಳು ಸರ್ಕಾರ ನೀಡಿರುವಂತಹ ಸೌಲಭ್ಯಗಳ ಸದುಪಯೋಗ ಪಡೆದು ಸಾಮಾಜಿಕ ನ್ಯಾಯವನ್ನು ಪಡೆದುಕೊಳ್ಳಬೇಕೆಂದರು.
ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ವೀರಭದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಮುಂದೆ ಪಡೆದುಕೊಳ್ಳುವ ಸಾಮಾಜಿಕ ಸ್ಥಾನ ಮತ್ತು ಅಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನ ಮಾಡುವ ಪ್ರಯತ್ನ ಮಾಡಬೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್, ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ದಿನಗಳಿಂದಲೇ ಸಾಮಾಜಿಕ ನ್ಯಾಯಕ್ಕಿರುವ ಸವಾಲುಗಳು ಮತ್ತು ಅವಕಾಶಗಳ ಬಗ್ಗೆ ಅರಿವನ್ನು ಪಡೆದುಕೊಳ್ಳಬೇಕು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸರ್ಕಾರದ ನೀತಿಯು ಸಾಮಜಿಕ ನ್ಯಾಯದ ಅನುಷ್ಠಾನಕ್ಕೆ ಪೂರಕವಾಗಿದೆ ಎಂದರು.
ಪ್ರಾಧ್ಯಾಪಕರಾದ ಮರಿಯಾ ಪಿಂಟೋ, ಲೋಕೇಶ್.ಬಿ.ಆರ್. ಮಲ್ಲೇಶ್‌ಗೌಡ, ಡಾ.ನಾಗೇಂದ್ರಪ್ಪ, ಡಾ.ಮಧು, ವಸಂತ್‌ಕುಮಾರ್, ಪವಿತ್ರ, ಸುಮಂತ್ ಕುಮಾರ ಜೈನ್, ಬಾಬುಪ್ರಸಾದ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net