ರಾಯರಿಗೆ ಪೂರ್ವಾರಾಧನೆ ಪೂಜೆ

ಚನ್ನರಾಯಪಟ್ಟಣದ ಕೋಟೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಗಳ 355 ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಪ್ರಯುಕ್ತ ರಾಯರಿಗೆ ವಿಶೇಷವಾದ ಹೂವಿನ ಅಲಂಕಾರ ಮಾಡಲಾಗಿತ್ತು.
ಚನ್ನರಾಯಪಟ್ಟಣದ ಕೋಟೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಗಳ 355 ನೇ ಆರಾಧನಾ ಮಹೋತ್ಸವದ ಪೂರ್ವಾರಾಧನೆ ಪ್ರಯುಕ್ತ ರಾಯರಿಗೆ ವಿಶೇಷವಾದ ಹೂವಿನ ಅಲಂಕಾರ ಮಾಡಲಾಗಿತ್ತು.
Published on

ಚನ್ನರಾಯಪಟ್ಟಣ:

ಪಟ್ಟಣದ ಕೋಟೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಗುರುಗಳ 355ನೇ ಆರಾಧನಾ ಮಹೋತ್ಸವ ಪ್ರಯುಕ್ತ ಶನಿವಾರ ರಾಯರ ಪೂರ್ವಾರಾಧನೆ ಭಕ್ತಿಪೂರ್ವಕವಾಗಿ ನೆರವೇರಿತು.

ಆರಾಧನೆ ಹಿನ್ನೆಲೆಯಲ್ಲಿ ಶ್ರೀ ಮಠದ ಪ್ರಾಂಗಣ ಹಾಗೂ ಮುಂಭಾಗ ತರಹೇವಾರಿ ಬಣ್ಣಗಳ ವಿದ್ಯುತ್ ದೀಪಗಳು ಹಾಗೂ ನವೀನ ಮಾದರಿಯಲ್ಲಿ ಹಣ್ಣು ತರಕಾರಿ ಮತ್ತು ಹೂವಿನ ಅಲಂಕಾರ ಮಾಡಲಾಗಿದ್ದು, ಮಠದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಶ್ರೀ ಮಠಕ್ಕೆ ತಾಲೂಕಿನ ವಿವಿಧೆಡೆಗಳಿಂದ ಭಕ್ತ ಸಮೂಹ ಅಗಮಿಸಿ ಗುರುದರ್ಶನ ಪಡೆದರು. ಅಲಂಕೃತವಾಗಿದ್ದ ಶ್ರೀ ಮಠ ಭಕ್ತರ ಮನಸೂರೆಗೊಂಡಿತ್ತು.
ಶ್ರೀ ವಾಸುದೇವಾಚಾರ್ ಆಗಮಿಕ ಅರ್ಚಕ ವೃಂದ ಮತ್ತು ಜಿ.ಎನ್.ವಾದಿರಾಜ ಆಚಾರ್ಯರ ನೇತೃತ್ವದಲ್ಲಿ ಬೆಳಗ್ಗೆ 6.30ಕ್ಕೆ ಉಷಾಕಾಲ ಪೂಜೆ ಧಾರ್ಮಿಕ ಕಾರ್ಯಗಳು ಆರಂಭವಾದವು. ಪಂಚಾಮೃತ ಅಭಿಷೇಕ ನಂತರ ಪಾದಪೂಜೆ ಸೇವೆ, ಮಹಾಮಂಗಳಾರತಿ ಇನ್ನಿತರ ಧಾರ್ಮಿಕ ಕಾರ್ಯಗಳು ವಿಧಿವತ್ತಾಗಿ ಸಂಪನ್ನಗೊಂಡವು.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡೋಲ್ ಯೋಗಾನರಸಿಂಹ ತೆಂಗಿನಭಾಗ ಮತ್ತು ಕುಮಾರಸ್ವಾಮಿ ವಗರಹಳ್ಳಿ, ತಂಡದವರಿಂದ ನಾದಸ್ವರ ಕಾರ್ಯಕ್ರಮ ನೆರವೇರಿತು. ಬಳಿಕ ಮಹಾಮಂಗಳಾರತಿ, ನಂತರ ತೀರ್ಥ ಪ್ರಸಾದ ವಿನಿಯೋಗ ಜರಗಿತು, ಶ್ರೀ ಮಠಕ್ಕೆ ಭಕ್ತರು ಶ್ರದ್ಧಭಕ್ತಿಪೂರ್ವಕವಾಗಿ ನಮನ ಸಲ್ಲಿಸಿ ಗುರುಗಳ ದರ್ಶನ ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net