ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಿ

ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನೇಮಕಾತಿಯಲ್ಲಿ ನಡೆಯುವ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ನವೆಂಬರ್ ತಿಂಗಳಿಂದ ಫೆಬ್ರವರಿವರೆಗೆ ಎಐಡಿವೈಒ ಸಂಘಟನೆಯು ಹಾಸನದ ಯುವಜನರು, ಉದ್ಯೋಗಾಕಾಂಕ್ಷಿಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಿದ ನೂರಾರು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಇತ್ತೀಚೆಗೆ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನೇಮಕಾತಿಯಲ್ಲಿ ನಡೆಯುವ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ ನವೆಂಬರ್ ತಿಂಗಳಿಂದ ಫೆಬ್ರವರಿವರೆಗೆ ಎಐಡಿವೈಒ ಸಂಘಟನೆಯು ಹಾಸನದ ಯುವಜನರು, ಉದ್ಯೋಗಾಕಾಂಕ್ಷಿಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಿದ ನೂರಾರು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಇತ್ತೀಚೆಗೆ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಿ
  • ಎಐಡಿವೈಒ ಸಂಘಟನೆಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರ
  • ನೇಮಕ ಆರಂಭಿಸಲು ಆಗ್ರಹ
ಹಾಸನ: ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನೇಮಕಾತಿಯಲ್ಲಿ ನಡೆಯುವ ಭ್ರಷ್ಟಾಚಾರ ತಡೆಗಟ್ಟುವಂತೆ ಆಗ್ರಹಿಸಿ, ನವೆಂಬರ್ ತಿಂಗಳಿಂದ ಫೆಬ್ರವರಿವರೆಗೆ ಎಐಡಿವೈಒ ಸಂಘಟನೆಯು ಹಾಸನದ ಯುವಜನರು, ಉದ್ಯೋಗಾಕಾಂಕ್ಷಿಗಳು ಮತ್ತು ಸಾರ್ವಜನಿಕರಿಂದ ಸಂಗ್ರಹಿಸಿದ ನೂರಾರು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಇತ್ತೀಚೆಗೆ ಪ್ರತಿಭಟನೆ ಮೂಲಕ ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು.
ಎಐಡಿವೈಒ ಜಿಲ್ಲಾ ಸಂಚಾಲಕ ಟಿ.ಆರ್. ಸುನೀಲ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆ ಖಾಲಿ ಇದ್ದರೂ ಅದನ್ನು ತುಂಬಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿಲ್ಲ. ಕಳೆದ ಐದಾರು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ನೇಮಕಾತಿ ಆಗದಿರುವುದು ಉದ್ಯೋಗಾಕಾಂಕ್ಷಿಗಳಲ್ಲಿ ಆಕ್ರೋಶ ಮಡುಗಟ್ಟಿದೆ ಎಂದರು.
ವಿದ್ಯಾರ್ಥಿಗಳು ಪದೇ ಪದೆ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ನಿರಂತರ ಹೋರಾಟದ ಪ್ರತಿಫಲವಾಗಿ ಮುಖ್ಯಮಂತ್ರಿಗಳು 56,432 ಹುದ್ದೆ ಭರ್ತಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದರು. ಆದರೆ ಈವರೆಗೂ ನೇಮಕ ಪ್ರಕ್ರಿಯೆ ಆರಂಭವಾಗಿಲ್ಲ. ಸಂಪುಟದಲ್ಲೂ ಅನುಮೋದನೆ ನೀಡಲಾಗಿದೆ ಎಂದು ಭರವಸೆ ನೀಡಲಾಗಿದೆ. ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ಒತ್ತಾಯಿಸಿದರು.
ಭ್ರಷ್ಟಾಚಾರ ತಡೆಗಟ್ಟಿ, ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು, ನೇಮಕಾತಿಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು, ಅರ್ಜಿ ಶುಲ್ಕ ಕಡಿತ ಮಾಡಬೇಕು, ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗ ನಾಶ ಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ಹೆಸರಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂಬ ಕಾರಣ ನೀಡಿ ಗ್ರಾಮೀಣ ಶಾಲೆಗಳನ್ನು ವಿಲೀನಗೊಳಿಸುವ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಬಡ ಹಾಗೂ ಹಿಂದುಳಿದ ಕುಟುಂಬಗಳ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆ ಉಂಟಾಗುವುದರ ಜತೆಗೆ ಶಿಕ್ಷಕರ ಹುದ್ದೆಗಳೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಹಾಗಾಗಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ನೀತಿ ಕೈಬಿಟ್ಟು ಸರ್ಕಾರಿ ಶಾಲೆ ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿವೈಒ ಉದ್ಯೋಗ ಆಕಾಂಕ್ಷಿ ಹೋರಾಟ ಸಮಿತಿ ಅಧ್ಯಕ್ಷ ರಘು, ಉಪಾಧ್ಯಕ್ಷರಾದ ರತನ್, ಶರತ್, ಸಂತೋಷ್, ಶಿವಕುಮಾರ್ ನಾಯ್ಕ ಹಾಗೂ ಸಮಿತಿ ಸದಸ್ಯರಾದ ಗೌತಮ್, ಯೋಗೆಶ್, ಅರುಣ್, ಆದರ್ಶ್, ಮನೋಜ್, ಶಿವು, ಅಪ್ಪು, ದೀಪು, ಮಂಜು, ಹೇಮಂತ್, ಸಾಗರ್, ಪ್ರಸನ್ನ, ಕಾರ್ತಿಕ್, ಪ್ರಕಾಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net