ಗುಣಮಟ್ಟದ ಕಾಮಗಾರಿಗೆ ಅದ್ಯತೆ ನೀಡಿ

ತಾಲೂಕಿನ ಇಂಟಿತೊಳಲು-ಮೂಳೆಹೋಳೆ ಗ್ರಾಮಗಳ ಸಂಪರ್ಕ ರಸ್ತೆ ಕಾಮಗಾರಿಗೆ  ಶಾಸಕ ಎಚ್. ಕೆ. ಸುರೇಶ್ ಭೂಮಿ ಪೂಜೆ ನೆರವೇರಿಸಿದರು. ಅಧಿಕಾರಿಗಳು ಹಾಗೂ ಗ್ರಾಮಸ್ಥರಿದ್ದರು.
ತಾಲೂಕಿನ ಇಂಟಿತೊಳಲು-ಮೂಳೆಹೋಳೆ ಗ್ರಾಮಗಳ ಸಂಪರ್ಕ ರಸ್ತೆ ಕಾಮಗಾರಿಗೆ ಶಾಸಕ ಎಚ್. ಕೆ. ಸುರೇಶ್ ಭೂಮಿ ಪೂಜೆ ನೆರವೇರಿಸಿದರು. ಅಧಿಕಾರಿಗಳು ಹಾಗೂ ಗ್ರಾಮಸ್ಥರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳಿಗೆ ಶಾಸಕ ಎಚ್. ಕೆ. ಸುರೇಶ್ ಸೂಚನೆ
ಬೇಲೂರು: ತಾಲೂಕಿನ ಇಂಟಿತೊಳಲು ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಇತ್ತೀಚೆಗೆ ಭೂಮಿ ಪೂಜೆ ಸಲ್ಲಿಸಿ, ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಹೇಳಿದರು.
ತಾಲೂಕಿನ ಕೆಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಟಿತೊಳಲು-ಮೂಳೆಹೋಳೆ ಗ್ರಾಮಗಳ ಸಂಪರ್ಕ ರಸ್ತೆಯು ಸ್ವಾತಂತ್ಯ ಪೂರ್ವದಿಂದಲೂ ಹಾಳಾಗಿದ್ದು ರಸ್ತೆ ಅಭಿವೃದ್ಧಿಯಾಗಿರಲಿಲ್ಲ. ಆದರೆ ಈ ರಸ್ತೆಯನ್ನು ಅಭಿವೃದ್ದಿ ಪಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೊಟ್ಟ ಮಾತಿನಂತೆ ಎತ್ತಿನಹೊಳೆ ನೀರಾವರಿ ಯೋಜನೆಯಡಿ 75 ಲಕ್ಷ ರೂ, ಅನುದಾನದಲ್ಲಿ ಈ ಗ್ರಾಮಗಳ ರಸ್ತೆಯನ್ನು ಅಭಿವೃದ್ದಿ ಪಡಿಸಲಾಗುತ್ತಿದೆ ಎಂದು ಹೇಳಿದರು.
ಕ್ಷೇತ್ರದ 46 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಗಲೇ ಸಾಕಷ್ಟು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಂತ ಹಲವಾರು ಕೆಲಸಗಳನ್ನು ಸಾರ್ವಜನಿಕರ ಹಿತಾಸಕ್ತಿಗಾಗಿ ಹುಡುಕಿ ಮಾಡಿಸಿ ಕೊಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮೂಲ ಸೌಲಭ್ಯಗಳನ್ನು ಗ್ರಾಮಕ್ಕೆ ಒದಗಿಸಿ ಕೊಡಲಾಗುವುದು ಎಂದರು.
ಎತ್ತಿನಹೊಳೆ ನೀರಾವರಿ ಯೋಜನಾ ವಿಭಾಗದ ಅಧಿಕಾರಿಗಳು ಹಾಗೂ ಗ್ರಾಮಸ್ಥರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net