ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ

ಬೇಲೂರು ತಾಲೂಕಿನ ಬಂಟೇನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್  ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಗ್ರಾಮಸ್ಥರಾದ  ಸುಜಿತ್, ಮಧು, ಪಿಡಿಒ ವಿಶ್ವ, ನಂದಕುಮಾರ್, ಸವಿತಾ ಇತರರು ಇದ್ದರು.
ಬೇಲೂರು ತಾಲೂಕಿನ ಬಂಟೇನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಗ್ರಾಮಸ್ಥರಾದ ಸುಜಿತ್, ಮಧು, ಪಿಡಿಒ ವಿಶ್ವ, ನಂದಕುಮಾರ್, ಸವಿತಾ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಎಚ್.ಕೆ.ಸುರೇಶ್ ಭರವಸೆ
  • ಬಂಟೇನಹಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
ಬೇಲೂರು: ಗ್ರಾಮೀಣ ಭಾಗದ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಬಂಟೇನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಬೇಲೂರು ತಾಲೂಕಿನ ಸಾಕಷ್ಟು ಗ್ರಾಮಗಳಲ್ಲಿ ಇನ್ನೂ ಸರಿಯಾದ ರಸ್ತೆಗಳಿಲ್ಲ. ಅಂತಹ ಸ್ಥಳಗಳನ್ನು ನಾನೇ ಖುದ್ದಾಗಿ ಪರಿಶೀಲಿಸಿ ಗ್ರಾಮಸ್ಥರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಕೆಲವು ಗ್ರಾಮದ ಜನರ ಮನವಿ ಮೇರೆಗೆ ಪಕ್ಷಾತೀತವಾಗಿ ಸ್ಪಂದಿಸುವೆ. ಎಲ್ಲೆಲ್ಲಿ ರಸ್ತೆ ಅಭಿವೃದ್ಧಿ ಅಗತ್ಯವಿದೆ ಎಂಬುದನ್ನು ತಿಳಿದು ಕ್ರಮ ವಹಿಸುವೆ ಎಂದರು. ಒಟ್ಟಾರೆ ಕಾಮಗಾರಿಯಲ್ಲಿ ಯಾವುದೇ ರಾಜಕೀಯ ಮಾಡದೆ ಕ್ಷೇತ್ರದ ಅಭಿವೃದ್ಧಿಗಾಗಿ ಸಂಬಂಧಿಸಿದ ಸಚಿವರು, ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಹಂತ ಹಂತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ ಎಂದರು.
ಕ್ಷೇತ್ರದ ಜನತೆಗೆ ಅನುಕೂಲ ಕಲ್ಪಿಸಿ ಕೊಡುವುದು ನನ್ನ ಕರ್ತವ್ಯ. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಬಂಟೇನಹಳ್ಳಿ ಗ್ರಾಮಸ್ಥರಾದ ಲತೀಫ್, ಸುಜಿತ್, ಮಧು, ಪಿಡಿಒ ವಿಶ್ವ,ನಂದಕುಮಾರ್, ಸವಿತಾ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net