ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪೋರ್ಟ್ಸ್‌ನಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ಆರ್.ಟಿ.ದ್ಯಾವೇಗೌಡ, ಎಚ್.ಜೆ. ಅಮರೇಂದ್ರ, ಡಾ.ಎಚ್.ಎಸ್. ನರಸಿಂಹನ್, ಎ.ಜೆ. ಕೃಷ್ಣಯ್ಯ, ಡಾ.ಶಿವಶಂಕರ್, ಮಂಜುನಾಥ್, ಬಿ.ಎನ್.ಬೃಂದಾ, ಆರ್.ಬಿ.ಶ್ರುತಿ ಇತರರಿದ್ದರು.
ಹಾಸನ ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪೋರ್ಟ್ಸ್‌ನಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು. ಆರ್.ಟಿ.ದ್ಯಾವೇಗೌಡ, ಎಚ್.ಜೆ. ಅಮರೇಂದ್ರ, ಡಾ.ಎಚ್.ಎಸ್. ನರಸಿಂಹನ್, ಎ.ಜೆ. ಕೃಷ್ಣಯ್ಯ, ಡಾ.ಶಿವಶಂಕರ್, ಮಂಜುನಾಥ್, ಬಿ.ಎನ್.ಬೃಂದಾ, ಆರ್.ಬಿ.ಶ್ರುತಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
  • ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗ
ಹಾಸನ: ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪೋರ್ಟ್ಸ್‌ನಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂಟಿಇಎಸ್ ಅಧ್ಯಕ್ಷ ಆರ್.ಟಿ.ದ್ಯಾವೇಗೌಡ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಜತೆಗೆ ಹಲವಾರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಕ್ರೀಡಾಕೂಟದಲ್ಲಿ ಗೆಲುವು, ಸೋಲು ಮುಖ್ಯವಲ್ಲ. ಇದನ್ನು ಸ್ಪರ್ಧಾತ್ಮಕವಾಗಿ ತೆಗೆದುಕೊಂಡು ಸೌಹಾರ್ದಯುತವಾಗಿ ಭಾಗವಹಿಸಿ ಪಾಲ್ಗೊಳ್ಳುವುದು ಪ್ರಮುಖವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಈ ಎಲ್ಲ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಮಾತಾನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭೆ ಪ್ರದರ್ಶನಕ್ಕೆ ಇಂಥ ಅವಕಾಶಗಳು ಅಗತ್ಯವಾಗಿದೆ. ಕಾಲೇಜು ಆವರಣ ಬಹಳಷ್ಟು ವಿಸ್ತಾರವಾಗಿದೆ. ಇಲ್ಲಿ ಎಲ್ಲ ರೀತಿಯ ಆಟದ ಮೈದಾನಗಳಿವೆ. ಆಟೋಟಗಳಿಗೆ ಅನುಕೂಲ ಮಾಡಲಾಗಿದೆ. ಓದುವಿನ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಿ ಎಂದು ತಿಳಿಸಿದರು.
ಪ್ರಾಂಶುಪಾಲ ಡಾ.ಎಚ್.ಜೆ. ಅಮರೇಂದ್ರ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಹೊರ ಕಾಲೇಜುಗಳ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಬಹುಮಾನ ಪಡೆದಿದ್ದಾರೆ. ಇದು ಕಾಲೇಜಿಗೆ ಗೌರವ ತಂದಿದೆ ಎಂದರು.
ಸಿವಿಲ್ ವಿಭಾಗದ ಮುಖ್ಯಸ್ಥ ಡಾ.ಎಚ್.ಎಸ್.ನರಸಿಂಹನ್, ಸಿವಿಲ್ ವಿಭಾಗದ ಪ್ರಾಧ್ಯಾಪಕ ಡಾ.ಎ.ಜೆ. ಕೃಷ್ಣಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ.ಶಿವಶಂಕರ್, ಪ್ರಾಧ್ಯಾಪಕ ಮಂಜುನಾಥ್, ಸಹ ಪ್ರಾಧ್ಯಾಪಕ ಹಾಗೂ ಕಾರ್ಯಕ್ರಮ ಸಂಯೋಜಕ ಬಿ.ಎನ್.ಬೃಂದಾ ಹಾಗೂ ಆರ್.ಬಿ.ಶ್ರುತಿ ಇತರರಿದ್ದರು.
ಸಿವಿಲ್ ಇಂಜಿನಿಯರಿಂಗ್ ಬ್ರಾಂಚ್ ಸ್ಪೋರ್ಟ್ಸ್ 2025-26ರ ಕ್ರಿಡಾಕೂಟದಲ್ಲಿ ಕ್ರಿಕೆಟ್, ಸ್ವಿಮ್ಮಿಂಗ್, ವಾಲಿಬಾಲ್, ಕಬಡ್ಡಿ, ಥ್ರೋ ಬಾಲ್, ಫುಟ್‌ಬಾಲ್, ಬ್ಯಾಡ್ಮಿಂಟನ್‌ನಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net