ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯ

ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ವಕೀಲ ಬಿ. ಚಂದ್ರಶೇಖರ್, ಎಂ.ಎಸ್.ಮಧು ಕುಮಾರಿ, ಎಚ್.ಎಲ್.ಗುರುಪ್ರಸಾದ್ ಇತರರಿದ್ದರು.
ಹಾಸನಾಂಬ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ಉದ್ಘಾಟಿಸಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ವಕೀಲ ಬಿ. ಚಂದ್ರಶೇಖರ್, ಎಂ.ಎಸ್.ಮಧು ಕುಮಾರಿ, ಎಚ್.ಎಲ್.ಗುರುಪ್ರಸಾದ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಕರ್ತವ್ಯ
  • ಹಿರಿಯ ನ್ಯಾಯಾಧೀಶೆ ಜಿ.ಕೆ.ದಾಕ್ಷಾಯಿಣಿ ಹೇಳಿಕೆ
  • ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ
ಹಾಸನ: ಮಕ್ಕಳ ಹಕ್ಕಗಳನ್ನು ರಕ್ಷಣೆ ಮಾಡುವುದು ಪ್ರತಿ ನಾಗರಿಕರ ಆದ್ಯ ಕರ್ತವ್ಯವಾಗಿದ್ದು, ಮಕ್ಕಳನ್ನು ಬಾಲ್ಯದಿಂದಲೇ ದುಡಿಮೆಗೆ ನೂಕಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ.ದಾಕ್ಷಾಯಿಣಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಮತ್ತು ಕಿಶೋರ ಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ರಕ್ಷಣಾ ಘಟಕ, ವಕೀಲರ ಸಂಘ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
14 ವರ್ಷ ಮೇಲ್ಪಟ್ಟ 18 ವರ್ಷ ಒಳಗಿನ ಮಕ್ಕಳನ್ನು ದುಡಿಮೆಯಲ್ಲಿ ತೊಡಗಿಸಿಕೊಳ್ಳಬಹುದು. ಆದರೆ, ಯಾವುದೇ ಅಪಾಯಕರವಾದ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಂತಿಲ್ಲ. ಕಾನೂನಿನ ನಿಯಮಗಳನ್ನು ಉಲ್ಲಂಘನೆ ಮಾಡಿ ದುಡಿಮೆಗೆ ತೊಡಗಿಸಿಕೊಂಡರೆ ಕಾನೂನು ಅಡಿಯಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.
ಬಾಲಕಾರ್ಮಿಕರು ಪತ್ತೆಯಾದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದು ಮತ್ತು ಪೊಲೀಸ್ ಇಲಾಖೆಯ
ಸಹಾಯವಾಣಿ ಸಂಖ್ಯೆ 112 ಗೆ ದೂರು ಸಲ್ಲಿಸಬಹುದೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡುವುದು ಪಾಲಕರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ತಿಳಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿಧಿ ಮಾತನಾಡಿ, ಕಾನೂನಿನ ಬಗ್ಗೆ ಪ್ರತಿಯೊಬ್ಬರಲ್ಲೂ ತಿಳಿವಳಿಕೆ ಇರಬೇಕು. ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳಬಾರದು. ಪ್ರತಿಯೊಬ್ಬ ಮಗುವಿಗೂ ತನ್ನದೇ ಆದ ಕನಸುಗಳಿದ್ದು, ಅವುಗಳನ್ನು ನನಸು ಮಾಡಿಕೊಳ್ಳುವ ಹಕ್ಕಿದೆ. ಆದರೆ ಬಾಲ ಕಾರ್ಮಿಕ ಪದ್ಧತಿ ಅವರ ಬಾಲ್ಯವನ್ನು ಕಸಿದುಕೊಳ್ಳುತ್ತದೆ. ಅವರ ಭವಿಷ್ಯವನ್ನು ಕತ್ತಲೆಯತ್ತ ತಳ್ಳುತ್ತದೆ. ಹೀಗಾಗಿ ಈ ನಿಟ್ಟಿನಲ್ಲಿ ಸಮಾಜ ಜಾಗೃತವಾಗಿರಬೇಕು ಎಂದರು.
ವಕೀಲ ಬಿ. ಚಂದ್ರಶೇಖರ್ ಮಾತನಾಡಿ, ನಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಚಿಕ್ಕ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುತ್ತಿದ್ದರೆ, ಅದನ್ನು ತಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಂ.ಎಸ್.ಮಧು ಕುಮಾರಿ, ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಎಚ್.ಎಲ್.ಗುರುಪ್ರಸಾದ್, ಕಾರ್ಮಿಕ ಅಧಿಕಾರಿ ಎಚ್.ಆರ್.ಆನಂದ್ ರಾಮು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ಎಚ್.ಕನಕಲಕ್ಷ್ಮೀ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net