ಗೋಹತ್ಯೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ

 ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಹಾಗೂ ಕಸಾಯಿಖಾನೆಗೆ ಕರೆದೊಯ್ಯುವ ಪ್ರಕರಣಗಳು ಹೆಚ್ಚಾಗಿದ್ದು, ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖಂಡರು ಎಸ್ಪಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆ ನಗರಾಧ್ಯಕ್ಷ ದರ್ಶನ್, ಧರ್ಮ ನಾಯಕ್ ಇತರರಿದ್ದರು.
ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಹಾಗೂ ಕಸಾಯಿಖಾನೆಗೆ ಕರೆದೊಯ್ಯುವ ಪ್ರಕರಣಗಳು ಹೆಚ್ಚಾಗಿದ್ದು, ಈ ಸಂಬಂಧ ಕ್ರಮಕೈಗೊಳ್ಳಬೇಕು ಎಂದು ಶ್ರೀರಾಮ ಸೇನೆ ಮುಖಂಡರು ಎಸ್ಪಿಗೆ ಮನವಿ ಸಲ್ಲಿಸಿದರು. ಶ್ರೀರಾಮ ಸೇನೆ ನಗರಾಧ್ಯಕ್ಷ ದರ್ಶನ್, ಧರ್ಮ ನಾಯಕ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗೋಹತ್ಯೆ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಹೋರಾಟ
  • ಎಸ್ಪಿಗೆ ಮನವಿ ಸಲ್ಲಿಸಿದ ಶ್ರೀರಾಮ ಸೇನೆ ಮುಖಂಡರು
ಹಾಸನ: ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಹಾಗೂ ಕಸಾಯಿಖಾನೆಗೆ ಕರೆದೊಯ್ಯುವ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಎಸ್ಪಿ ಕಚೇರಿ ಮುಂದೆ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮ ಸೇನೆ ಎಚ್ಚರಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಹೇಮಂತ್ ಜಾನೆಕೆರೆ, ಒಂದು ದಿನದ ಹಿಂದೆ 350ಕ್ಕೂ ಹೆಚ್ಚು ಗೋ ಚರ್ಮಗಳನ್ನು ಸಾಗಿಸುವಾಗ ವಾಹನ ಸಮೇತ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಕಳೆದ ಮೂರು ತಿಂಗಳಿಂದ ಪ್ರತಿದಿನವೂ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರೂ ಇದುವರೆಗೂ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಾಸನ ನಗರದ ಪೆನ್ಷನ್ ಮೊಹಲ್ಲಾ ಹಾಗೂ ಸುತ್ತಮುತ್ತ ಗೋವುಗಳನ್ನು ಕಡಿದು ತೂಗು ಹಾಕಿದ ಪ್ರಕರಣಗಳು ನಡೆದರೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು. ಬುಧವಾರ ರಾತ್ರಿ ಗೋ ಚರ್ಮ ಸಾಗಿಸುತ್ತಿದ್ದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ ಬಳಿಕ ಸಿಟಿ ಪಿಎಸ್‌ಐ ಸುಮೊಟೊ ಕೇಸು ದಾಖಲಿಸಿರುವುದನ್ನು ಸ್ವಾಗತಿಸಿದರೂ, ನಿರಂತರವಾಗಿ ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಏಕೆ ಇವರ ಮೇಲೆ ಸ್ವಯಂ ಪ್ರೇರಿತ ಪ್ರಕರಣಗಳು ದಾಖಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಶ್ರೀರಾಮ ಸೇನೆ ನಗರಾಧ್ಯಕ್ಷ ದರ್ಶನ್, ಧರ್ಮ ನಾಯಕ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net