ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ

ತಾಲೂಕಿನ ಮಲೆನಾಡು ಭಾಗದಲ್ಲಿನ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ರೈತರು, ಕೋಗೋಡು ಗ್ರಾಮದಲ್ಲಿ ರಸ್ತೆ ತಡೆದು  ಪ್ರತಿಭಟಿಸಿದರು.  ಕಾಫಿ ಬೆಳೆಗಾರರ ಸಂಘದ ಹೋಬಳಿ ಅಧ್ಯಕ್ಷ ಆನಂತರಾಜು, ಗ್ರಾಪಂ ಅಧ್ಯಕ್ಷ ಹರೀಶ್, ಬೆಳೆಗಾರರಾದ ಸವೀನ್, ಸುನೀಲ್, ವಿಶ್ವನಾಥ್, ಗೋಪಿ, ಮಂಜುನಾಥ ದೀಕ್ಷಿತ್, ಸಂದೀಪ, ಶಶಿಕಲಾ, ಯೋಗೇಂದ್ರ ಸೇರಿದಂತೆ ಇತರರಿದ್ದರು.
ತಾಲೂಕಿನ ಮಲೆನಾಡು ಭಾಗದಲ್ಲಿನ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ರೈತರು, ಕೋಗೋಡು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು. ಕಾಫಿ ಬೆಳೆಗಾರರ ಸಂಘದ ಹೋಬಳಿ ಅಧ್ಯಕ್ಷ ಆನಂತರಾಜು, ಗ್ರಾಪಂ ಅಧ್ಯಕ್ಷ ಹರೀಶ್, ಬೆಳೆಗಾರರಾದ ಸವೀನ್, ಸುನೀಲ್, ವಿಶ್ವನಾಥ್, ಗೋಪಿ, ಮಂಜುನಾಥ ದೀಕ್ಷಿತ್, ಸಂದೀಪ, ಶಶಿಕಲಾ, ಯೋಗೇಂದ್ರ ಸೇರಿದಂತೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರು, ಕಾಫಿ ಬೆಳೆಗಾರರಿಂದ ವಾಹನ ಸಂಚಾರ ತಡೆದು ಪ್ರತಿಭಟನೆ
ಬೇಲೂರು: ತಾಲೂಕಿನ ಮಲೆನಾಡು ಭಾಗದಲ್ಲಿ ಬೆಳೆ ನಾಶಪಡಿಸಿ ಮನುಷ್ಯರ ಮೇಲೆ ದಾಳಿಗೆ ಮುಂದಾಗುತ್ತಿರುವ ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ರೈತರು, ಕಾಫಿ ಬೆಳೆಗಾರರಿಂದ ಕೋಗೋಡು-ಚೀಕನಹಳ್ಳಿ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಶುಕ್ರವಾರ ಪ್ರತಿಭಟಿಸಿದರು.
ಕಾಫಿ ಬೆಳೆಗಾರರ ಸಂಘದ ಜಿಲ್ಲಾ ನಿರ್ದೇಶಕ ಕೋಗೋಡು ಸಂತೋಷ್ ಮಾತನಾಡಿ, ಅರೇಹಳ್ಳಿ ಹೋಬಳಿಯ ಭಾಗದಲ್ಲಿ 100ಕ್ಕೂ ಹೆಚ್ಚು ಕಾಡಾನೆಗಳಿದ್ದು, ಅವುಗಳಿಂದ ನೂರಾರು ಎಕರೆ ಬೆಳೆ ನಾಶವಾಗುತ್ತಿದೆ. ಜತೆಗೆ ಸಾಕಷ್ಟು ಜನರು ಬಲಿಯಾಗಿದ್ದಾರೆ. ರೈತರು ತೋಟಕ್ಕೆ ಹೋಗಿ ವಾಪಸ್ ಬರುತ್ತಾರೆ ಎನ್ನುವ ನಂಬಿಕೆ ಇಲ್ಲದಂತಾಗಿದೆ. ಹಗಲು ರಾತ್ರಿ ಎನ್ನದೆ ಕಾಡಾನೆಗಳು ಎಲ್ಲೆಂದರಲ್ಲಿ ಓಡಾಡುತ್ತಿವೆ. ಈ ಕಾಡಾನೆಗಳ ಸಮಸ್ಯೆಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಚೀಕನಹಳ್ಳಿ-ಹುನುಗನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಜನರು ಮುಂದಿನ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಬೇಕಾಗುತ್ತದೆ. ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ರಾಷ್ಟ್ರೀಯ ಹೆದ್ದಾರಿ ತಡೆದು ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಫಿ ಬೆಳೆಗಾರರ ಸಂಘದ ತಾಲೂಕು ಕಾರ್ಯದರ್ಶಿ ಗೆಂಡೇಹಳ್ಳಿ ಲೋಕೇಶ್ ಮಾತನಾಡಿ, ಕಾಡಾನೆಗಳ ದಾಳಿಯಿಂದ 30 ವರ್ಷಗಳ ಹಿಂದೆ ಬೆಳೆಸಿದ ಗಿಡಗಳೆಲ್ಲ ನಾಶವಾಗಿವೆ. ಮತ್ತೆ ಬೆಳೆಸಬೇಕೆಂದರೆ ಮತ್ತೆ 30 ವರ್ಷ ಬೇಕು. ಕೇರಳದಲ್ಲಿ ವ್ಯಕ್ತಿ ಸತ್ತರೆ ನಮ್ಮ ಆನೆಯಿಂದ ಸತ್ತಿದ್ದಾರೆ ಎಂದು ಮುಖ್ಯಮಂತ್ರಿ ಪರಿಹಾರ ಕೊಡುತ್ತಾರೆ. ಇಲ್ಲಿ ಕೋಟ್ಯಂತರ ರೂ. ಹಾನಿ ಮಾಡಿದರೂ ತಿರುಗಿ ನೋಡುತ್ತಿಲ್ಲ. ಅಧಿಕಾರಿಗಳು ಇಲ್ಲಿನ ಮಾಹಿತಿ ತಿಳಿಸಿ ಸುಮ್ಮನಾಗುತ್ತಾರೆ ಹೊರತು ಮತ್ತೆ ಗಮನ ಹರಿಸುವುದಿಲ್ಲ. ಆದ್ದರಿಂದ ಮುಂದಿನ ಒಂದು ವಾರದೊಳಗೆ ಸಮಸ್ಯೆಗೆ ಕ್ರಮಕೈಗೊಳ್ಳದಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net