ಬಿಎಲ್‌ಒಗಳಿಗೆ ಸೂಕ್ತ ತರಬೇತಿ ನೀಡಿ

ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಲತಾ ಕುಮಾರಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹುಲಿಮನೆ ತಿಮ್ಮಣ್ಣ ಇತರರಿದ್ದರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಡಿಸಿ ಲತಾ ಕುಮಾರಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹುಲಿಮನೆ ತಿಮ್ಮಣ್ಣ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಎಲ್‌ಒಗಳಿಗೆ ಸೂಕ್ತ ತರಬೇತಿ ನೀಡಿ
  • ಮಾಸ್ಟರ್ ಟ್ರೈನರ್‌ಗಳಿಗೆ ಜಿಲ್ಲಾಧಿಕಾರಿ ಸೂಚನೆ
ಹಾಸನ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಲು ನಿಗಾವಹಿಸಿ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ಮಾತನಾಡಿ, ಬಿಎಲ್‌ಒಗಳಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಲು ಮಾಸ್ಟರ್ ಟ್ರೈನರ್‌ಗಳಿಗೆ ಸೂಚನೆ ನೀಡಿದರು.
ಮತಗಟ್ಟೆ ಅಧಿಕಾರಿಗಳಿಗೆ ಏನೇ ಅನುಮಾನ ಬಂದರೂ ಅದನ್ನು ಬಗೆಹರಿಸಿಕೊಳ್ಳಲು ಸೂಚಿಸಿದರು.
ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ಅನುಮಾನಕ್ಕೆ ಆಸ್ಪದ ನೀಡದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜಕೀಯ ಪಕ್ಷಗಳು ಪ್ರತಿಯೊಂದು ಮತಗಟ್ಟೆಗೂ ತಮ್ಮ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಹುಲಿಮನೆ ತಿಮ್ಮಣ್ಣ, ತಹಸೀಲ್ದಾರ್‌ಗಳು ಹಾಗೂ ಮಾಸ್ಟರ್ ಟ್ರೈನರ್ ಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net