ನರೇಗಾದಡಿ ಜನರಿಗೆ ಅನುಕೂಲ ಕಲ್ಪಿಸಿ

ಹಾನುಬಾಳು, ಹಲಸುಲಿಗೆ ಗ್ರಾಪಂಗಳಲ್ಲಿ ಪರಿಶೀಲನೆ
ಹಾನುಬಾಳು, ಹಲಸುಲಿಗೆ ಗ್ರಾಪಂಗಳಲ್ಲಿ ಪರಿಶೀಲನೆ
Published on

ಪ್ರಮುಖ ಮುಖ್ಯಾಂಶಗಳು

  • ನರೇಗಾದಡಿ ಜನರಿಗೆ ಅನುಕೂಲ ಕಲ್ಪಿಸಿ
  • ಅಧಿಕಾರಿಗಳಿಗೆ ಜಿಪಂ ಸಿಇಒ ಶುಭಂ ಶುಕ್ಲಾ ಸೂಚನೆ
  • ಹಾನುಬಾಳು, ಹಲಸುಲಿಗೆ ಗ್ರಾಪಂಗಳಲ್ಲಿ ಪರಿಶೀಲನೆ
ಹಾಸನ: ಸಕಲೇಶಪುರ ತಾಲೂಕು ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಬುಧವಾರ ಭೇಟಿ ನೀಡಿ ನರೇಗಾ ಯೋಜನೆ, ಇತರ ಯೋಜನೆಗಳಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು.
ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(ಕೆಆರ್‌ಐಡಿಎಲ್)ದಿಂದ 5054 ಯೋಜನೆಯಡಿ ಅನುಷ್ಠಾನಗೊಂಡ ಸಿಮೆಂಟ್ ಕಾಂಕ್ರೀಟ್ ರಸ್ತೆ, ಸಿಮೆಂಟ್ ಕಾಂಕ್ರೀಟ್ ಚರಂಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಸಿ.ಸಿ. ಚರಂಡಿ ಕಾಮಗಾರಿಯನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.
ತೆರೆದ ಬಾವಿ, ಅಡಿಕೆ ಸಸಿ ನಾಟಿ ಮುಂತಾದ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಂಡ ವೈಯಕ್ತಿಕ ಫಲಾನುಭವಿಗಳೊಂದಿಗೆ ಸಮಾಲೋಚಿಸಿದರು. ಹಾನುಬಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಶೌಚಗೃಹ ವ್ಯವಸ್ಥೆ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮುಂತಾದ ವಿಷಯಗಳ ಬಗ್ಗೆ ಪರಿಶೀಲಿಸಿ ಅಲ್ಲಿನ ಶಾಲೆಯ ಮುಖ್ಯೋಪಾಧ್ಯಾಯರು, ಶಾಲಾ ಮಕ್ಕಳು, ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪ್ರತಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ವಿಲೇವಾರಿ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net