ಪುರದಮ್ಮ ದೇಗುಲಕ್ಕೆ ಸೌಕರ್ಯ ಕಲ್ಪಿಸಿ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಸ್ವರೂಪ್ ಪ್ರಕಾಶ್  ಅಧ್ಯಕ್ಷತೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ  ಸಾರ್ವಜನಿಕ ಸಮಸ್ಯೆ ಪರಿಹರಿಸುವ ಸಭೆ ನಡೆಸಲಾಯಿತು. ಡಿಸಿ ಲತಾಕುಮಾರಿ, ಎಡಿಸಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ತಹಸೀಲ್ದಾರ್ ಗೀತಾ, ಲತಾ ಇತರರಿದ್ದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಸ್ವರೂಪ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆ ಪರಿಹರಿಸುವ ಸಭೆ ನಡೆಸಲಾಯಿತು. ಡಿಸಿ ಲತಾಕುಮಾರಿ, ಎಡಿಸಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ತಹಸೀಲ್ದಾರ್ ಗೀತಾ, ಲತಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪುರದಮ್ಮ ದೇಗುಲಕ್ಕೆ ಸೌಕರ್ಯ ಕಲ್ಪಿಸಿ
  • ಶಾಸಕ ಸ್ವರೂಪ್ ಪ್ರಕಾಶ್ ಸೂಚನೆ
  • ಅಧಿಕಾರಿಗಳೊಂದಿಗೆ ಸಭೆ
ಹಾಸನ: ಪುರದಮ್ಮ ದೇವಸ್ಥಾನಕ್ಕೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದಲೂ
ಭಕ್ತರು ಆಗಮಿಸುವ ಕಾರಣ ಅಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು
ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕ ಸಮಸ್ಯೆ ಪರಿಹರಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಪುರದಮ್ಮ ದೇವಸ್ಥಾನದಿಂದ ಬರುವ ಆದಾಯ, ಹುಂಡಿ ಹಣವನ್ನು ಬೇರೆಯ ಯಾವುದೇ ಕಾಮಗಾರಿಗಳಿಗೆ ಬಳಕೆ ಮಾಡಬಾರದು, ದೇವಸ್ಥಾನದ ಮೂಲ ಸೌಕರ್ಯಗಳಿಗೆ ಹಾಗೂ
ಅಭಿವೃದ್ದಿಗೆ ಮಾತ್ರ ಬಳಕೆ ಮಾಡಬೇಕು, ಹುಂಡಿ ಎಣಿಕೆಯನ್ನು ಸ್ಥಳೀಯ ಮುಖಂಡರ
ಸಮ್ಮುಖದಲ್ಲೇ ಮಾಡಬೇಕು ಎಂದು ತಿಳಿಸಿದರು.
ಶುಲ್ಕ ನಿಗದಿಮಾಡಿ: ನಗರದ ಸುಭಾಷ್ ಚೌಕದಲ್ಲಿರುವ ಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಾಗೂ ದೇವಿಗೆರೆ ದೇವಸ್ಥಾನದಲ್ಲಿರುವ ಪಾರ್ಕಿಂಗ್ ನಿರ್ವಹಣೆಗೆ ಟೆಂಡರ್ ಕರೆದು ಶುಲ್ಕ ನಿಗದಿ ಪಡಿಸಬೇಕು ಎಂದು ಶಾಸಕರು ಸೂಚಿಸಿದರು.
ಬಗರ್ ಹುಕುಂನಲ್ಲಿ ಅರ್ಜಿ ಸಲ್ಲಿಸಿರುವ ಸಂಬಂಧಿಸಿದಂತೆ ಮಂಜೂರಾತಿಗೆ ಕ್ರಮ ವಹಿಸಬೇಕು, ದುರಸ್ತಿ ಸಂಬಂಧಿಸಿದಂತೆ ಕಂದಾಯ ಸಚಿವರು ನಿರ್ದೇಶನದಂತೆ ಕನಿಷ್ಠ 2 ದಾಖಲೆಗಳಿರುವ ಹಾಗೂ ದಾಖಲೆಗಳು ಇಲ್ಲದಿರುವ ಸಂದರ್ಭದಲ್ಲಿ ಸಮಿತಿಯ ಮುಂದೆ ಇಟ್ಟು ಪರಿಶೀಲಿಸಿ ತುರ್ತಾಗಿ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಮಹಾನಗರ ಪಾಲಿಕೆಗೆ ಸೇರ್ಪಡೆಯಾಗಿರುವ ನೂತನ ಗ್ರಾಮಗಳಿಗೆ ಇ-ಸ್ವತ್ತು ನೀಡುವ ಸಲುವಾಗಿ, ವಾಣಿಜ್ಯ ಮಳಿಗೆಗಳಿಗೆ ಹರಾಜು ಪ್ರಕ್ರಿಯೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು ಶಾಸಕರು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಶೌಚಗೃಹಗಳನ್ನು ನಿರ್ಮಿಸಿ:
ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಮಾತನಾಡಿ ಪುರದಮ್ಮ ದೇವಸ್ಥಾನದ ಆವರಣದಲ್ಲಿ ಭಕ್ತರ ಅನುಕೂಲಕ್ಕಾಗಿ ಶೌಚಗೃಹಗಳನ್ನು ನಿರ್ಮಾಣ ಮಾಡಬೇಕು. ಕಸದ ನಿರ್ವಹಣೆ ಆಗಬೇಕು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು. ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಸಭೆಯನ್ನು ನಡೆಸುವಂತೆ ತಿಳಿಸಿದರು.
ದೇವಿಗೆರೆ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳನ್ನು ಗಮನಿಸಬೇಕು. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣನವರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ರುದ್ರಮುನಿ, ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ, ತಹಸೀಲ್ದಾರ್ ಗೀತಾ, ಮುಜರಾಯಿ ಇಲಾಖೆಯ ತಹಸೀಲ್ದಾರ್ ಲತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net