ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳ ಪ್ರಗತಿ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಸಮಗ್ರ ಪರಿಶೀಲನಾ ಸಭೆ ನಡೆಯಿತು. ಡಿಎಚ್‌ಒ ಅನಿಲ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ
ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
ಸಮಗ್ರ ಪರಿಶೀಲನಾ ಸಭೆ
ಹಾಸನ: ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳ ಪ್ರಗತಿ ಕುರಿತು ಸಂಸದ ಶ್ರೇಯಸ್ ಎಂ. ಪಟೇಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಮಗ್ರ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಲಾಯಿತು.
ತಾಯಿ ಮತ್ತು ಶಿಶು ಆರೋಗ್ಯ, ಲಸಿಕಾ ಕಾರ್ಯಕ್ರಮ, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ತುರ್ತು ವೈದ್ಯಕೀಯ ಸೇವೆಗಳು, ವೈದ್ಯರು ಹಾಗೂ ಸಿಬ್ಬಂದಿಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು.
ಜಿಲ್ಲೆಯ ಜನತೆಗೆ ಸಮಯೋಚಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಆರೋಗ್ಯ ಸೇವೆಗಳ ವಿತರಣೆಯಲ್ಲಿ ಯಾವುದೇ ರೀತಿಯ ಲೋಪಗಳು ಕಂಡುಬರದಂತೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಂಸದರು ಸೂಚಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳು ಸುಲಭವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಹಿರಿಯ ನಾಗರಿಕರು ಹಾಗೂ ಬಡ ವರ್ಗದ ಜನರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನಸಿರ್ಂಗ್ ಸಿಬ್ಬಂದಿ ಹಾಗೂ ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಜತೆಗೆ ಆಸ್ಪತ್ರೆಗಳ ಸ್ವಚ್ಛತೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ರೋಗಿಗಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ಸೂಚಿಸಲಾಯಿತು.
ಮಳೆಗಾಲದ ಹಿನ್ನೆಲೆಯಲ್ಲಿ ಡೆಂೆ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರೋಗಗಳ ಹರಡುವಿಕೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಯಿತು.
ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನ ಪ್ರಗತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಎದುರಾಗಿರುವ ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಸೇವಾ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಲಾಯಿತು.
ಆರೋಗ್ಯಕರ ಹಾಸನ ಜಿಲ್ಲೆಯ ನಿರ್ಮಾಣ ನಮ್ಮ ಗುರಿಯಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆಗಳನ್ನು ಒದಗಿಸಲು ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ ಎಂದರು. ಡಿಎಚ್‌ಒ ಅನಿಲ್ ಇತರರಿದ್ದರು.