ಮಳೆ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಿ

ಆಲೂರು ತಾಲೂಕಿನ ಗೇಕರವಳ್ಳಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಮಲ್ಲಿಕಾರ್ಜುನ, ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಆಲೂರು ತಾಲೂಕಿನ ಗೇಕರವಳ್ಳಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಕ್ಕೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಮಲ್ಲಿಕಾರ್ಜುನ, ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್‌ಗೆ ಶಾಸಕ ಸಿಮೆಂಟ್ ಮಂಜು ಸೂಚನೆ
ಆಲೂರು: ಮಳೆಯಿಂದ ಹಾನಿಗೊಳಗಾಗಿರುವ ಮನೆಗಳಿಗೆ ಸರ್ಕಾರದಿಂದ ದೊರಕುವ ಪರಿಹಾರ ಧನವನ್ನು ಶೀಘ್ರ ತಲುಪಿಸಬೇಕು ಎಂದು ತಹಸೀಲ್ದಾರ್‌ಗೆ ಶಾಸಕ ಸಿಮೆಂಟ್ ಮಂಜು ಸೂಚಿಸಿದರು.
ತಾಲೂಕಿನ ಗೇಕರವಳ್ಳಿ ಮತ್ತು ಕಗ್ಗರವಳ್ಳಿ ಗ್ರಾಮಗಳಲ್ಲಿ ಮಳೆಹಾನಿಗೊಳಗಾಗಿದ್ದ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಎರಡೂ ಗ್ರಾಮಗಳಲ್ಲಿ ಸುಮಾರು 14ಕ್ಕೂ ಹೆಚ್ಚು ಮನೆಗಳ ಹೆಂಚು ಮತ್ತು ಶೀಟ್ ಹಾರಿ ಹೋಗಿರುವುದರಿಂದ ನಿವಾಸಿಗಳು ವಾಸ ಮಾಡುವುದು ಕಷ್ಟವಾಗಿದೆ. ಹಾಗಾಗಿ ಕೂಡಲೇ ಪರಿಹಾರ ಕೊಡಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿ, ಹಾನಿಗೊಳಗಾಗಿರುವ ಮನೆಗಳ ಬಗ್ಗೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿ ಮತ್ತು ಪಿಆರ್‌ಡಿಇ ಇಂಜಿನಿಯರ್ ವರದಿ ನೀಡಿದ ನಂತರ ಸರ್ಕಾರದ ಸುತ್ತೋಲೆಯಂತೆ ಅಧಿಕೃತ ನಿವಾಸಿಗಳಿಗೆ ಪರಿಹಾರ ಚೆಕ್ ವಿತರಿಸಲಾಗುವುದು ಎಂದರು.
ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವಿ ಮಾತನಾಡಿ, ಮಳೆ, ಗಾಳಿಯಿಂದ ತಾಲೂಕಿನಲ್ಲಿ ಸುಮಾರು 8 ವಿದ್ಯುತ್ ಕಂಬಗಳು ಧರೆಗುರುಳಿವೆ. ದುರಸ್ತಿ ಕಾರ್ಯ ಸಾಗಿದೆ ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net