ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

ತಾಲೂಕಿನ ರಾಜನಶಿರೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವುದಕ್ಕಾಗಿ ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಸಾರ್ವಜನಿಕರ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು. ಎಂ.ಎಚ್.ರಘು, ಜಗದೀಶ್ ಇತರರು ಇದ್ದರು.
ತಾಲೂಕಿನ ರಾಜನಶಿರೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವುದಕ್ಕಾಗಿ ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಸಾರ್ವಜನಿಕರ ಸಭೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಮಾತನಾಡಿದರು. ಎಂ.ಎಚ್.ರಘು, ಜಗದೀಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • sale of illegal liquor
ಬೇಲೂರು: ತಾಲೂಕಿನಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ವಿಶೇಷ ದಳ ರಚಿಸಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ತಿಳಿಸಿದರು.
ತಾಲೂಕಿನ ರಾಜನಶಿರೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟುವುದಕ್ಕಾಗಿ ಕರೆಯಲಾಗಿದ್ದ ವಿವಿಧ ಇಲಾಖೆ ಅಧಿಕಾರಿಗಳ ಮತ್ತು ಸಾರ್ವಜನಿಕರ ಸಭೆಯಲ್ಲಿ ಗ್ರಾಮಸ್ಥರು, ಮಹಿಳೆಯರು ನೀಡಿದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸಂದೇಹ ಬಂದ ತಕ್ಷಣವೇ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಲಿಖಿತವಾಗಿ ಪಕ್ಕಾ ದಾಖಲೆಗಳೊಂದಿಗೆ ದೂರು ನೀಡಿದರೆ ಅಧಿಕಾರಿಗಳು ಕ್ರಮ ಕೈಗೊಳ್ಳಲೇಬೇಕು. ಅಕ್ರಮ ಮದ್ಯದ ಪರಿಣಾಮವಾಗಿ ಹಲವಾರು ಕುಟುಂಬಗಳು ಹಾಳಾಗುತ್ತಿವೆ. ಹೆಣ್ಣುಮಕ್ಕಳ ದುಡಿಮೆ ಹಣವನ್ನು ಕೆಲವರು ಕಳೆಯುತ್ತಿದ್ದಾರೆ. ಇದೆಲ್ಲವೂ ನಿಲ್ಲಬೇಕಿದೆ. ಮದ್ಯ ಮಾರಾಟ ನಿಷೇಧಿಸುವಂತೆ ಮಹಿಳೆಯರು ಮಾಡುತ್ತಿರುವ ಹೋರಾಟ ಶ್ಲಾಘನೀಯ ಎಂದರು.
ಸಭೆಯಲ್ಲಿ ಭಾಗವಹಿಸಿದ ಮಹಿಳೆಯರು, ಹಲವು ವರ್ಷಗಳಿಂದ ಈ ಸಮಸ್ಯೆ ಮುಂದುವರಿದಿದ್ದು, ಪೊಲೀಸ್ ಇಲಾಖೆ ಸ್ಪಂದಿಸಿಲ್ಲ ಎಂದು ದೂರಿದರು. ಕೆಲ ಪ್ರದೇಶಗಳಲ್ಲಿ ಬಾರ್‌ಗಳಿಂದಲೇ ಅಕ್ರಮವಾಗಿ ಮದ್ಯ ಸರಬರಾಜು ನಡೆಯುತ್ತಿದೆ ಎಂದು ಆರೋಪಿಸಿದರು. ಈ ಸಂದರ್ಭ ಸಭೆಯಲ್ಲಿದ್ದ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಸನ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಎಂ.ಎಚ್.ರಘು, ಪೊಲೀಸ್ ವೃತ್ತ ನಿರೀಕ್ಷಕ ಜಗದೀಶ್, ತಾಪಂ ಇಒ ಸತೀಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net