ಗುಣಮಟ್ಟದ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉತ್ತಮ

ಅರಕಲಗೂಡು ತಾಲೂಕು ಮಲ್ಲಿಪಟ್ಟಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭವನ್ನು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್ ಗೌಡ ಉದ್ಘಾಟಿಸಿದರು. ಕೆ.ಪಿ. ನಾರಾಯಣ, ಸುಚಿತ್ರಾ, ತಬ್ರೇಜ್ ನದೀಮ್, ಹುಧಾ ಫಾತಿಮಾ ಡೆಲ್ವಿ ಇತರರಿದ್ದರು.
ಅರಕಲಗೂಡು ತಾಲೂಕು ಮಲ್ಲಿಪಟ್ಟಣದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭವನ್ನು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್ ಗೌಡ ಉದ್ಘಾಟಿಸಿದರು. ಕೆ.ಪಿ. ನಾರಾಯಣ, ಸುಚಿತ್ರಾ, ತಬ್ರೇಜ್ ನದೀಮ್, ಹುಧಾ ಫಾತಿಮಾ ಡೆಲ್ವಿ ಇತರರಿದ್ದರು.
Published on

ಅರಕಲಗೂಡು:

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತರೆ ಅವರು ಉತ್ತಮ ಬದುಕು ರೂಪಿಸಿಕೊಂಡು ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್ ಗೌಡ ಹೇಳಿದರು.

ತಾಲೂಕಿನ ಮಲ್ಲಿಪಟ್ಟಣದ ನಾಡ್ಜ್ ಸಂಸ್ಥೆಯ ಸುಚಿತ್ರ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಶಿಸ್ತು, ಸಮಯಪಾಲನೆ ಹಾಗೂ ಕರ್ತವ್ಯ ಪ್ರಜ್ಞೆ ಬೆಳೆಸುವುದು ಅಗತ್ಯ. ಮಕ್ಕಳು ಕೇವಲ ಪಠ್ಯಪುಸ್ತಕದ ವಿದ್ಯೆಗೆ ಸೀಮಿತರಾಗದೆ ತಮ್ಮಲ್ಲಿರುವ ಪ್ರತಿಭೆ ಹೊರಹಾಕಬೇಕು. ಜತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ನಾಯಕತ್ವದ ಜವಾಬ್ದಾರಿ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಚುನಾವಣೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಹಾಕಿ, ಪ್ರಮಾಣವಚನ ಬೋಧಿಸುವ ಮೂಲಕ ನಾಯಕತ್ವದ ಅಧಿಕಾರ ಹಸ್ತಾಂತರ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಸಂಸ್ಥೆಯ ಸುಚಿತ್ರ, ತಬ್ರೇಜ್ ನದೀಮ್, ಅಕಾಡೆಮಿಕ್ ನಿರ್ದೇಶಕಿ ಹುಧಾ ಫಾತಿಮಾ ಡೆಲ್ವಿ, ಮುಖ್ಯಶಿಕ್ಷಕ ಆರ್.ವಿ. ದರ್ಶನ್, ಸಿಆರ್‌ಪಿ ಮಲ್ಲಿಕಾರ್ಜುನ, ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್, ದೇವರಾಜು, ಭಾಗ್ಯಮ್ಮ, ಶ್ರುತಿ, ಗೀತಾ, ಸಂಸ್ಥೆಯ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net