ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಕನಸಿಗೆ ಧಕ್ಕೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಆತಂಕ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಆಶ್ರಯದಲ್ಲಿ ಬುಧವಾರ ವಿದ್ಯಾರ್ಥಿಗಳ ಧ್ವನಿ ಸಂವಾದ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿ-ಧಾರವಾಡ ಹುಡಾ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಲಕ್ಷ್ಮಣ್, ರಂಜಿತ್, ಶಶಿಧರ್, ಕುಮಾರ್ ಇತರರಿದ್ದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಆತಂಕ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಆಶ್ರಯದಲ್ಲಿ ಬುಧವಾರ ವಿದ್ಯಾರ್ಥಿಗಳ ಧ್ವನಿ ಸಂವಾದ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿ-ಧಾರವಾಡ ಹುಡಾ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ, ಲಕ್ಷ್ಮಣ್, ರಂಜಿತ್, ಶಶಿಧರ್, ಕುಮಾರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಕನಸಿಗೆ ಧಕ್ಕೆ
  • ಹುಡಾ ಅಧ್ಯಕ್ಷ ಶಾಕೀರ್ ಸನದಿ ಕಳವಳ
  • ಯೂತ್ ಕಾಂಗ್ರೆಸ್ ವತಿಯಿಂದ ಅಭಿಪ್ರಾಯ ಸಂಗ್ರಹ

ಹಾಸನ:

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಆತಂಕ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಯೂತ್ ಕಾಂಗ್ರೆಸ್ ಆಶ್ರಯದಲ್ಲಿ ಬುಧವಾರ ವಿದ್ಯಾರ್ಥಿಗಳ ಧ್ವನಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಸಂಯೋಜಕರಾಗಿ ಭಾಗವಹಿಸಿದ್ದ ದೆಹಲಿಯ ಎಐಸಿಸಿ ಸದಸ್ಯ ಹಾಗೂ ಹುಬ್ಬಳ್ಳಿ-ಧಾರವಾಡ ಹುಡಾ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಮಾತನಾಡಿ, ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅಭಿಪ್ರಾಯ ಮತ್ತು ಸಲಹೆಗಳನ್ನು ಕೇಂದ್ರ ಹಾಗೂ ಸಂಬಂಧಿತ ಸರ್ಕಾರಿ ಮಟ್ಟಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳಿಗೆ ಧಕ್ಕೆಯಾಗಿದ್ದು, ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾದ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿನ ಮೂಲವೇ ಪಾರದರ್ಶಕತೆ ಮತ್ತು ವಿಶ್ವಾಸವಾಗಿದ್ದು, ಆ ವಿಶ್ವಾಸಕ್ಕೆ ಧಕ್ಕೆ ಬಂದರೆ ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುತ್ತದೆ ಎಂದರು.

ವಿದ್ಯಾರ್ಥಿಗಳ ಧ್ವನಿ ಸದಾ ಪ್ರಬಲವಾಗಿರುತ್ತದೆ. ಇತಿಹಾಸದಲ್ಲಿ ವಿದ್ಯಾರ್ಥಿಗಳ ಹೋರಾಟಗಳು ಸರ್ಕಾರಗಳ ನಿರ್ಧಾರಗಳನ್ನೇ ಬದಲಾಯಿಸಿದ ಉದಾಹರಣೆಗಳಿವೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಸಂಘಟಿತರಾಗಿ ಧ್ವನಿ ಎತ್ತಬೇಕು. ನೀಟ್ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು ಸಂಪೂರ್ಣ ಪಾರದರ್ಶಕವಾಗಿ ನಡೆಯುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಅನೇಕ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದು, ಕೆಲವರು ಆತ್ಮಹತ್ಯೆಗೂ ಶರಣಾಗಿರುವುದು ದುಃಖಕರ ಸಂಗತಿ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳು ನುಚ್ಚುನೂರಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸ ಮರುಸ್ಥಾಪಿಸಲು ಕಟ್ಟುನಿಟ್ಟಿನ ಕ್ರಮ ಅಗತ್ಯ ಎಂದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಇದು ರಾಜಕೀಯ ವಿಚಾರವಲ್ಲ. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಹೇಳಿದರು. ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳಿಂದ ಅವರ ಪರಿಶ್ರಮಕ್ಕೆ ಬೆಲೆ ಸಿಗದಂತಾಗಿದೆ. ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಆಲಿಸಿ ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಸಂವಾದ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು ಮಾತನಾಡಿ, ವಿದ್ಯಾರ್ಥಿಗಳ ಧ್ವನಿ ಕಾರ್ಯಕ್ರಮದ ಉದ್ದೇಶ ರಾಜಕೀಯ ಮಾಡುವುದು ಅಲ್ಲ. ವಿದ್ಯಾರ್ಥಿಗಳ ಆತಂಕ, ಸಮಸ್ಯೆ ಮತ್ತು ಸಲಹೆಗಳನ್ನು ಆಲಿಸಿ ಸೂಕ್ತ ವೇದಿಕೆಗೆ ತಲುಪಿಸುವುದಾಗಿದೆ. ಪರೀಕ್ಷಾ ವ್ಯವಸ್ಥೆ ಸಂಪೂರ್ಣ ಪಾರದರ್ಶಕವಾಗಿರಬೇಕು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶವೇ ಇರಬಾರದು ಎಂಬುದು ಎಲ್ಲ ವಿದ್ಯಾರ್ಥಿಗಳ ಸಾಮಾನ್ಯ ಬೇಡಿಕೆಯಾಗಿದೆ ಎಂದರು.
ಸಂವಾದದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿನ ಸಮಸ್ಯೆಗಳು, ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪರಿಣಾಮಗಳು ಹಾಗೂ ಭವಿಷ್ಯದಲ್ಲಿ ಪರೀಕ್ಷೆಗಳನ್ನು ಹೆಚ್ಚು ಸುರಕ್ಷಿತವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಶಾಕೀರ್ ಸನ್ನದಿ ನೇರವಾಗಿ ಉತ್ತರಿಸಿ, ಅವರ ಸಲಹೆಗಳನ್ನು ಸಂಬಂಧಪಟ್ಟ ಮಟ್ಟಕ್ಕೆ ತಲುಪಿಸುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯಧ್ಯಕ್ಷ ಶಶಿಧರ್, ರಾಜ್ಯ ಕಾರ್ಯದರ್ಶಿ ಕುಮಾರ್, ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಂಜಿತ್ ಗೊರೂರು, ಇಸ್ಮಾಯಿಲ್, ವಿವೇಕ್, ಫರ್ಮಾನ್ ಶಾಹಿದ್, ದರ್ಶನ್, ಮನು, ಕುಮಾರಸ್ವಾಮಿ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net