ಮಳೆಗಾಗಿ ಪ್ರಾರ್ಥಿಸಿ ವಿಶೇಷ ರುದ್ರಾಭಿಷೇಕ

ಅರಕಲಗೂಡು ತಾಲೂಕಿನ ರಾಮನಾಥಪುರದ ಐತಿಹಾಸಿಕ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ದೇವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
ಅರಕಲಗೂಡು ತಾಲೂಕಿನ ರಾಮನಾಥಪುರದ ಐತಿಹಾಸಿಕ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಿ ದೇವರ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು.
Published on
ಅರಕಲಗೂಡು : ಮಳೆ ಕೊರತೆಯಿಂದ ರೈತ ಸಮುದಾಯ ಆತಂಕದಲ್ಲಿರುವ ಹಿನ್ನೆಲೆಯಲ್ಲಿ ತಾಲೂಕಿನ ರಾಮನಾಥಪುರದ ಐತಿಹಾಸಿಕ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಳೆಗಾಗಿ ಪ್ರಾರ್ಥಿಸಲಾಯಿತು. ದೇವರ ಸನ್ನಿಧಿಯಲ್ಲಿ ಸೋಮಸೂತ್ರ ಕಟ್ಟುವ ಅಪರೂಪದ ಧಾರ್ಮಿಕ ಆಚರಣೆಗೆ ಸೋಮವಾರ ಚಾಲನೆ ನೀಡಲಾಯಿತು.
ಮಳೆ ಕೊರತೆ ಎದುರಾದಾಗ ರಾಮೇಶ್ವರ ದೇವರಿಗೆ ಸೋಮಸೂತ್ರ ಕಟ್ಟಿ, ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರೆ ವರುಣ ದೇವನು ಪ್ರಸನ್ನನಾಗುತ್ತಾನೆ. ಉತ್ತಮ ಮಳೆಯಾಗುತ್ತದೆ ಎಂಬುದು ಸಾವಿರಾರು ವರ್ಷಗಳ ನಂಬಿಕೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ವಿಶೇಷ ಧಾರ್ಮಿಕ ವಿಧಿಗಳನ್ನು ಆಯೋಜಿಸಲಾಗಿದೆ.
ಆಚರಣೆಯ ಮೊದಲ ದಿನವಾದ ಸೋಮವಾರ ಭಕ್ತರು ಕಾವೇರಿ ನದಿಯಿಂದ ಬಿಂದಿಗೆಗಳಲ್ಲಿ ಪವಿತ್ರ ಜಲವನ್ನು ತಂದು ದೇವಾಲಯಕ್ಕೆ ಮೆರವಣಿಗೆಯ ಮೂಲಕ ತಂದರು. ಬಳಿಕ ರಾಮೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಶಿವಲಿಂಗಕ್ಕೆ ರುದ್ರಾಭಿಷೇಕ ಹಾಗೂ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದರು. ಉತ್ತಮ ಮಳೆ ಸುರಿದು ರೈತರ ಬೆಳೆಗಳು ಸಮೃದ್ಧಿಯಾಗಿ ಬೆಳೆಯಲಿ, ರಾಜ್ಯದಲ್ಲಿ ಸುಭಿಕ್ಷ ನೆಲೆಸಲಿ ಎಂದು ಪ್ರಾರ್ಥಿಸಿದರು. ದೇವಾಲಯದ ಅರ್ಚಕರು ವೇದಮಂತ್ರಗಳ ಪಠಣದೊಂದಿಗೆ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net