ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸ್ವೀಪ್ ಚಟುವಟಿಕೆಗಳ ಕುರಿತು ನಡೆದ ಸಭೆಯಲ್ಲಿ ಸಿಇಒ ಶುಭಂ ಶುಕ್ಲ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಸುನಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಇತರರು ಇದ್ದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸ್ವೀಪ್ ಚಟುವಟಿಕೆಗಳ ಕುರಿತು ನಡೆದ ಸಭೆಯಲ್ಲಿ ಸಿಇಒ ಶುಭಂ ಶುಕ್ಲ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಸುನಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ
  • ಜಿ.ಪಂ. ಸಿಇಒ ಶುಭಂ ಶುಕ್ಲಾ ಸೂಚನೆ ಅಧಿಕಾರಿಗಳ ಸಭೆ
ಹಾಸನ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸ್ವೀಪ್ ಚಟುವಟಿಕೆಗಳನ್ನು ನಡೆಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸ್ವೀಪ್ ಚಟುವಟಿಕೆಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜೂ.30ರಿಂದ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲಿದ್ದು, ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದೆ. ಈ ನಿಟ್ಟಿನಲ್ಲಿ ಎಸ್‌ಐಆರ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಶಾಲಾ, ಕಾಲೇಜು, ಹಾಸ್ಟೆಲ್‌ಗಳಲ್ಲಿ, ಕ್ರೀಡಾಂಗಣಗಳಲ್ಲಿ ಎಸ್‌ಐಆರ್ ಮಾನವ ಸರಪಳಿಯನ್ನು ನಿರ್ಮಿಸಿ ಜನರಲ್ಲಿ ಅರಿವು ಮೂಡಿಸುವುದು, ಬೀದಿ ನಾಟಕ ಪ್ರದರ್ಶನ, ಬ್ಯಾನರ್, ಪೋಸ್ಟರ್ ಹಾಗೂ ಪ್ಲೇ ಕಾರ್ಡ್ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಜಾಗೃತಿ ಮೂಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಸುನಿತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net