ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಬಿಡುಗಡೆ ಮಾಡಿ

ವಿಧಾನಸೌಧ ಕಚೇರಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ಭೇಟಿ ಮಾಡಿ ಮನವಿ ಸಲ್ಲಿಸಿದರು.
ವಿಧಾನಸೌಧ ಕಚೇರಿಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರನ್ನು ಶಾಸಕ ಸಿ.ಎನ್. ಬಾಲಕೃಷ್ಣ ಭೇಟಿ ಮಾಡಿ ಮನವಿ ಸಲ್ಲಿಸಿದರು.
Published on
ಚನ್ನರಾಯಪಟ್ಟಣ: ಚನ್ನರಾಯಪಟ್ಟಣದ ಅಮಾನಿಕೆರೆಯಿಂದ ತಾಲೂಕಿನ 25 ಕೆರೆಗಳಿಗೆ ನೀರು ಹರಿಸುವ ಏತ ನೀರಾವರಿ ಯೋಜನೆಗೆ (ತೋಟಿ ಪ್ರಾಜೆಕ್ಟ್ )ಭೂಮಿ ಕಳೆದುಕೊಂಡ ರೈತರಿಗೆ ಭೂ ಪರಿಹಾರ ನೀಡದಿರುವ ಕಾರಣದಿಂದ ಕಾಮಗಾರಿಗೆ ಹಿನ್ನಡೆಯಾಗಿದೆ. ಹೀಗಾಗಿ ಪರಿಹಾರ ಬಿಡುಗಡೆ ಮಾಡಿ, ಯೋಜನೆಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಸಿ.ಎನ್.ಬಾಲಕೃಷ್ಣ ಅವರು ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಮಾಡಿದರು.
ವಿಧಾನಸೌಧದ ಕಚೇರಿಯಲ್ಲಿ ಸೋಮವಾರ ಜಲಸಂಪನ್ಮೂಲ ಸಚಿವ ರಾಮಲಿಂಗರೆಡ್ಡಿ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚೆ ನಡೆಸಿದರು.
ಚನ್ನರಾಯಪಟ್ಟಣ ಅಮನಿಕೆರೆ ತೋಟಿ ಏತ ನೀರಾವರಿ ಯೋಜನೆ ಕೃಷಿ ಭೂಮಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿದೆ. ಸದರಿ ಯೋಜನೆಯ 900 ಮೀಟರ್‌ನ ರೈಸಿಂಗ್ ಮೈನ್ ಕಾಮಗಾರಿ ಬಾಕಿ ಇದ್ದು, ಪ್ರಾರಂಭದಿಂದ 16.00 ಕಿ.ಮೀ. ವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಸಿಗದಿವುದರಿಂದ ಕಾಮಗಾರಿಯು ಕುಂಠಿತವಾಗಿದೆ. ಭೂಮಿ ಕಳೆದುಕೊಂಡ ರೈತರು ಕಾಮಗಾರಿ ನಿರ್ವಹಿಸಲು ಅಡಚಣೆ ಮಾಡುತ್ತಿದ್ದು, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ, ರೈತರಿಗೆ ಪರಿಹಾರ ನೀಡಲು ಅವಶ್ಯವಿರುವ ಭೂ ಪರಿಹಾರ ಮೊತ್ತ ಹಾಗೂ ಕಟ್ಟಡ, ಇತರ ಮೌಲ್ಯಮಾಪನ ಮೊತ್ತ ಸೇರಿ ಒಟ್ಟು 11.19 ಕೋಟಿ ರೂ. ಬಿಡುಗಡೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಸಾವಿರಾರು ರೈತರು ಮತ್ತು ಗ್ರಾಮಸ್ಥರ ಕುಡಿಯುವ ನೀರಿನ ಯೋಜನೆಯಾಗಿದ್ದು, ಶೀಘ್ರದಲ್ಲಿಯೇ ಬಿಡುಗಡೆ ಮಾಡುವಂತೆ ಕಾವೇರಿ ನೀರಾವರಿ ನಿಗಮ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದರು. ಜತೆಗೆ ಶೀಘ್ರದಲ್ಲಿಯೇ ತಾಲೂಕಿಗೆ ಭೇಟಿ ನೀಡುವುದಾಗಿ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net