ರಸ್ತೆ ಬದಿಯ ಗೂಡಂಗಡಿಗಳ ತೆರವು

ಆಲೂರು-ಹುಣಸವಳ್ಳಿ ರಸ್ತೆ ಬದಿಯಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು. ತಹಸೀಲ್ದಾರ್ ಎಚ್. ಮಲ್ಲಿಕಾರ್ಜುನ, ಪಪಂ ಮುಖ್ಯಾಧಿಕಾರಿ ಮಂಜುನಾಥ್, ಎಎಸ್‌ಐ ಧರ್ಮ ಉಪಸ್ಥಿತರಿದ್ದರು.
ಆಲೂರು-ಹುಣಸವಳ್ಳಿ ರಸ್ತೆ ಬದಿಯಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು. ತಹಸೀಲ್ದಾರ್ ಎಚ್. ಮಲ್ಲಿಕಾರ್ಜುನ, ಪಪಂ ಮುಖ್ಯಾಧಿಕಾರಿ ಮಂಜುನಾಥ್, ಎಎಸ್‌ಐ ಧರ್ಮ ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • roadside kiosks

ಆಲೂರು:

ಆಲೂರು-ಹುಣಸವಳ್ಳಿ ರಸ್ತೆ ಬದಿಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ಗೂಡಂಗಡಿಗಳನ್ನು ತಹಸೀಲ್ದಾರ್ ಎಚ್. ಮಲ್ಲಿಕಾರ್ಜುನ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಸಮ್ಮುಖದಲ್ಲಿ ಜೆಸಿಬಿ ಬಳಸಿ ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಲಾಯಿತು.

ತಹಸೀಲ್ದಾರ್ ಎಚ್.ಮಲ್ಲಿಕಾರ್ಜುನ ಮಾತನಾಡಿ, ಪಟ್ಟಣ ಪಂಚಾಯಿತಿ ವತಿಯಿಂದ ಈ ಮೊದಲು ಸ್ಥಳೀಯ ಅಂಗಡಿ ಮಾಲೀಕರೊಂದಿಗೆ ಸಭೆ ನಡೆಸಿ, ತೆರವುಗೊಳಿಸಲು ಮಾನವೀಯತೆ ಹಿನ್ನೆಲೆಯಲ್ಲಿ ಆರು ತಿಂಗಳು ಕಾಲಾವಕಾಶ ನೀಡಲಾಗಿತ್ತು. ಎರಡು ತಿಂಗಳು ಹೆಚ್ಚುವರಿ ಸಮಯ ನೀಡಿ ಇಂದು ತೆರವುಗೊಳಿಸಲಾಗುತ್ತಿದೆ. ಸದರಿ ಜಾಗ ಸರ್ಕಾರದ ಸ್ವಾಧೀನದಲ್ಲಿರುತ್ತದೆ. ರಸ್ತೆಯಗಲಕ್ಕೂ ಸಿಮೆಂಟ್/ ಡಾಂಬರು ಹಾಕಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಅಂತಹ ಸ್ಥಳವನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಮಾತನಾಡಿ, ಸರ್ವೋಚ್ಚ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಪಟ್ಟಣ ಪಂಚಾಯಿತಿ ವ್ಯಾಪ್ತಿಗೊಳಪಡುವ ಎಲ್ಲ ರಸ್ತೆಗಳಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಹೌಸಿಂಗ್ ಬೋರ್ಡ್‌ನಲ್ಲಿಯೂ ಇದೆ ರೀತಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮರಸು ಕೂಡಿಗೆ ಮತ್ತು ಹೌಸಿಂಗ್‌ಬೋರ್ಡ್ ತಿರುವು ಸ್ಥಳಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಿಟ್ಟಿನಲ್ಲಿ ಹಂಪ್ಸ್‌ಗಳನ್ನು ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದರು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು.
ಆಲೂರು ಪೊಲೀಸ್ ಠಾಣೆಯ ಎಎಸ್‌ಐ ಧರ್ಮ ಸೇರಿದಂತೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಪೌರಕಾರ್ಮಿಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net