ಬರಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಗೊಬ್ಬರ ಕೊರತೆ ಆಗದಂತೆ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ ಎಂದು ಎಚ್ಚರಿಸಿದ್ದೇವೆ. ಸಿಎಂ ಅವರು ಸಚಿವರಿಗೆ ಜವಾಬ್ದಾರಿ ಕೊಟ್ಟಿದ್ದಾರೆ. ಆದರೆ, ದುರಂತ ಎಂದರೆ ಸಚಿವರು ತಮ್ಮ ಖಾತೆಗಳ ಅಸಮಾಧಾನ ಇನ್ನೂ ಹೊಂದಿದ್ದಾರೆ. ಇದೆಲ್ಲವನ್ನೂ ಬದಿಗಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದರು.