ಹಾಸನ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು. ಪಟೇಲ್ ಶಿವಪ್ಪ, ಮುನಿಸ್ವಾಮಿ, ದೇವರಾಜೇಗೌಡ, ರಘು ದಾಸರಕೊಪ್ಪಲು ಇತರರು ಇದ್ದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಅಭಿಮತ
ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ
ಹಾಸನ: ನಗರದ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು. ಗಣ್ಯರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ ಮಾತನಾಡಿ, ಸಂವಿಧಾನದಲ್ಲಿ ಅಡಕವಾಗಿರುವ ಮೀಸಲಾತಿಗಳಿಂದ ಇಂದಿನ ಸಮಾಜದಲ್ಲಿ ಮಹತ್ತರ ಬದಲಾವಣೆ ಕಂಡುಬಂದಿದೆ. ಶಿಕ್ಷಣ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಸಿಕ್ಕಿರುವುದು ಅಂಬೇಡ್ಕರ್ ಅವರ ದೂರದೃಷ್ಟಿಯ ಫಲ. ಮೀಸಲಾತಿ ಮೂಲಕ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸಿದ ಮಹಾನ್ ನಾಯಕ ಅಂಬೇಡ್ಕರ್ ಎಂದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮುನಿಸ್ವಾಮಿ ಮಾತನಾಡಿ, ಇಂದಿನ ಸಮಾಜದಲ್ಲೂ ಅಸ್ಪೃಶ್ಯತೆ ಮತ್ತು ಭಿನ್ನತೆ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಎಷ್ಟೇ ಶಿಕ್ಷಣ ಪಡೆದರೂ ಸಮಾಜದಲ್ಲಿ ಇನ್ನೂ ಕೆಲ ಅಸಮಾನತೆಗಳು ಜೀವಂತವಾಗಿವೆ. ಇಂತಹ ಸಮಸ್ಯೆಗಳನ್ನು ನಿವಾರಿಸಲು ಶಿಕ್ಷಣ ಮತ್ತು ಸಂಘಟಿತ ಹೋರಾಟ ಅತ್ಯಗತ್ಯವಾಗಿದೆ. ಅಂಬೇಡ್ಕರ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಅಧ್ಯಕ್ಷ ದೇವರಾಜೇಗೌಡ, ರಘು ದಾಸರಕೊಪ್ಪಲು, ಮಲ್ಲಿಗೆವಾಳ್ ದೇವಪ್ಪ, ರಾಮಚಂದ್ರ, ಅಶೋಕ್, ಪ್ರಕಾಶ್ ಇತರರಿದ್ದರು.