ಗ್ರಾಮೀಣ ಭಾಗದ ಜನರ ಸಮಸ್ಯೆಗೆ ಸ್ಪಂದಿಸಿ

ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಗೀಜಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕ ಶಿವಲಿಂಗೇಗೌಡ ಉದ್ಘಾಟಿಸಿದರು. ಹೇಮಾ ಶಿವಕುಮಾರ್, ಭೈರೇಶ್, ಅರುಣ್ ಕುಮಾರ್, ಧರ್ಮಶೇಖರ್, ನಾಗರಾಜ್, ದೇವರಾಜ್, ಪಾಲಾಕ್ಷ, ಕೇಶವಮೂರ್ತಿ ಇತರರು ಹಾಜರಿದ್ದರು
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಗೀಜಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕ ಶಿವಲಿಂಗೇಗೌಡ ಉದ್ಘಾಟಿಸಿದರು. ಹೇಮಾ ಶಿವಕುಮಾರ್, ಭೈರೇಶ್, ಅರುಣ್ ಕುಮಾರ್, ಧರ್ಮಶೇಖರ್, ನಾಗರಾಜ್, ದೇವರಾಜ್, ಪಾಲಾಕ್ಷ, ಕೇಶವಮೂರ್ತಿ ಇತರರು ಹಾಜರಿದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿಕೆ
  • ಜನಸಂಪರ್ಕ ಸಭೆ
ಅರಸೀಕೆರೆ ಗ್ರಾಮಾಂತರ: ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಶಾಸಕಾಂಗದ ಮಹತ್ವದಷ್ಟೇ ಕಾರ್ಯಾಂಗದ ಮಹತ್ವವು ಇದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.
ತಾಲೂಕಿನ ಕಸಬಾ ಹೋಬಳಿಯ ಗೀಜಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಜನ ಸಂಪರ್ಕ ಸಭೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಾವಿಬ್ಬರೂ ಜನರ ಸೇವಕರು. ಅದನ್ನು ಅರಿತು ನಾವು ನಡೆದರೆ ಜನರ ಪ್ರೀತಿ, ವಿಶ್ವಾಸ ಗಳಿಸಲು ಸಾಧ್ಯವಾಗಲಿದೆ ಎಂದು ಕಿವಿಮಾತು ಹೇಳಿದರು.
ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಕಾರ್ಯಗಳು ಸುಗಮವಾಗಿ ಆಗುತ್ತಿಲ್ಲ. ಅನವಶ್ಯಕವಾಗಿ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ ಎಂದು ಪ್ರತಿದಿನ ಗ್ರಾಮೀಣ ಭಾಗದ ಜನರು ನಮ್ಮ ಮನೆ ಮತ್ತು ಕಚೇರಿಗೆ ಬರುತ್ತಿದ್ದರು. ಇದನ್ನು ಸರಿಪಡಿಸುವ ಉದ್ದೇಶದಿಂದ ನಾನೇ ಜನರ ಮನೆ ಬಾಗಿಲಿಗೆ ಹೋಗುತ್ತಿದ್ದೇನೆ ಎಂದರು. ಜನಸಂಪರ್ಕ ಸಭೆಯಲ್ಲಿ ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಲಾಗುತ್ತಿದೆ ಎಂದು ಸಂತಸ ಹಂಚಿಕೊಂಡರು.
ಗ್ರಾಮೀಣ ಭಾಗದ ಜನರು ಎದುರಿಸುತ್ತಿರುವ ಬಹುತೇಕ ಸಮಸ್ಯೆಗೆ ಸ್ಥಳೀಯ ಗ್ರಾಮ ಪಂಚಾಯಿತಿಗಳ ಪಿಡಿಒಗಳ ಕಾರ್ಯವೈಖರಿ ಕಾರಣವಾಗಿದೆ. ಪಿಡಿಒಗಳು ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡದೆ ಹೋದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಗೀಜಿಹಳ್ಳಿ ಧರ್ಮ ಶೇಖರ್ ಮಾತನಾಡಿ, ಅಭಿವೃದ್ಧಿ ಯೋಜನೆಗಳು, ಮೂಲ ಸೌಕರ್ಯಗಳು ನಗರದ ಜನರಿಗೆ ಮಾತ್ರ ಸೀಮಿತ ಎಂಬ ಭಾವನೆ ಗ್ರಾಮೀಣ ಭಾಗದ ಜನರದಾಗಿತ್ತು. ಆದರೆ ಶಾಸಕರಾಗಿ ಶಿವಲಿಂಗೇಗೌಡರು ಚುನಾಯಿತರಾದ ಬಳಿಕ ನಗರ ಪ್ರದೇಶದಂತೆ ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳನ್ನು ಪೂರೈಸಿದ್ದಾರೆ ಎಂದರು.
ಗೀಜಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾ ಶಿವಕುಮಾರ್, ಮಾಜಿ ಅಧ್ಯಕ್ಷರಾದ ಧರ್ಮಣ್ಣ, ಯಳವಾರೆ ನಾಗಣ್ಣ, ಭೈರೇಶ್, ಬೋರನಕೊಪ್ಪಲು ಸ್ವಾಮಣ್ಣ, ಗ್ರೇಡ್ 2 ತಹಸೀಲ್ದಾರ್ ಪಾಲಾಕ್ಷ, ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಅರುಣ್ ಕುಮಾರ್, ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯ ವೈಕೆ ದೇವರಾಜ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net