ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ಶ್ರೀಗಜಲಕ್ಷ್ಮೀ ದೇವಸ್ಥಾನದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಲೋಕೇಶ್, ರಾಮಚಂದ್ರೇಗೌಡ ಇತರರು ಇದ್ದರು.
ಬೇಲೂರು: ಇಬ್ಬೀಡು ಗ್ರಾಮದ ಗಜಲಕ್ಷ್ಮೀ ದೇವಸ್ಥಾನದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಭಿವೃದ್ಧಿಗಾಗಿ ಗ್ರಾಮಸ್ಥರು ಬಹಳ ದಿನಗಳಿಂದ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.
ತಾಲೂಕಿನ ಇಬ್ಬೀಡು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇಬ್ಬೀಡು ಗ್ರಾಮದ ಶಕ್ತಿ ದೇವತೆ ಗಜಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವವು 15 ದಿನಗಳ ಹಿಂದೆ ನಡೆದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನಡೆಸಲು ಆಗಿರಲಿಲ್ಲ. ಈಗ ಎಲ್ಲ ಕಾರ್ಯಕ್ರಮಗಳು ಮುಗಿದಿರುವುದರಿಂದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಲ್ಲಿನ ರಸ್ತೆ ಕಿರಿದಾಗಿರುವುದರಿಂದ ಡಾಂಬರು ದೀರ್ಘಕಾಲ ಉಳಿಯುವುದಿಲ್ಲ. ಆದ್ದರಿಂದ ಶಾಶ್ವತ ಪರಿಹಾರವಾಗಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುತ್ತಿದೆ ಎಂದರು.
ಇಬ್ಬೀಡು ಗ್ರಾಪಂ ಮಾಜಿ ಅಧ್ಯಕ್ಷ ಲೋಕೇಶ್, ಗ್ರಾಮಸ್ಥರಾದ ರಾಮಚಂದ್ರೇಗೌಡ, ರಂಗನಾಯಕ್, ವಿಜಯೇಂದ್ರ, ಪಟೇಲ್ ರಾಜೇಗೌಡ ಸೇರಿದಂತೆ ಗ್ರಾಮಸ್ಥರಿದ್ದರು.