ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂ.

ಹೊಳೆನರಸೀಪುರ ತಾಲೂಕಿನ ನಗರನಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು. ವೈದ್ಯರಾದ ಡಾ.ರಾಜೇಶ್, ಡಾ.ಬಿ.ಎಸ್.ಸಿಂಚನಾ, ಲಕ್ಕೇಗೌಡ  ಇತರರು ಇದ್ದರು.
ಹೊಳೆನರಸೀಪುರ ತಾಲೂಕಿನ ನಗರನಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕ ಎ.ಮಂಜು ಭೂಮಿಪೂಜೆ ನೆರವೇರಿಸಿದರು. ವೈದ್ಯರಾದ ಡಾ.ರಾಜೇಶ್, ಡಾ.ಬಿ.ಎಸ್.ಸಿಂಚನಾ, ಲಕ್ಕೇಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅರಕಲಗೂಡು ಶಾಸಕ ಎ.ಮಂಜು ಹೇಳಿಕೆ
  • ನಗರನಹಳ್ಳಿಯಲ್ಲಿ ಕಾಮಗಾರಿಗೆ ಭೂಮಿಪೂಜೆ
ಹೊಳೆನರಸೀಪುರ: ಹಳ್ಳಿಮೈಸೂರು ಹೋಬಳಿ ನಗರನಹಳ್ಳಿ, ಟಿ.ಮಾಯಗೌಡನಹಳ್ಳಿ, ದೇವರ ಮುದ್ದನಹಳ್ಳಿ, ದೊಡ್ಡಹಳ್ಳಿ ಹಾಗೂ ನಿಡುವಣಿ ಗ್ರಾಮಗಳ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕಾಗಿ ತಲಾ 65 ಲಕ್ಷ ರೂ. ಅನುದಾನ ನೀಡಲಾಗಿದೆ ಎಂದು ಅರಕಲಗೂಡು ಶಾಸಕ ಎ. ಮಂಜು ಹೇಳಿದರು.
ತಾಲೂಕಿನ ನಗರಹಳ್ಳಿ ಗ್ರಾಮದ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ನಗರನಹಳ್ಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕೆಂಬುದು ಸಾರ್ವಜನಿಕರ ಬಹುದಿನಗಳ ಬೇಡಿಕೆ ಆಗಿತ್ತು. ಅವರ ನಿರೀಕ್ಷೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನಗರನಹಳ್ಳಿ ಗ್ರಾಮದ ದೇವಾಲಯ ಅಭಿವೃದ್ಧಿಗೆ 25 ಲಕ್ಷ ರೂ.ಮಂಜೂರು ಮಾಡಲಾಗಿದೆ. ರೈತರು ನೆಮ್ಮದಿಯಿಂದ ಬದುಕಬೇಕಾದರೆ ನೀರಾವರಿ ಸೌಲಭ್ಯ ಅತ್ಯವಶ್ಯಕವಾಗಿದೆ. ಹಾಗಾಗಿ ಹೇಮಾವತಿ ಬಲ ಮೇಲ್ದಂಡೆ ನಾಲೆ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದು, 11.40 ಕೋಟಿ ರೂ.ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಪುಟ್ಟಸೋಮಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್, ನಗರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಬಿ.ಎಸ್.ಸಿಂಚನಾ, ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿ ಕೆ.ಎಚ್.ಸಪ್ನಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಮುಖಂಡರಾದ ಲಕ್ಕೇಗೌಡ, ವಿರೂಪಾಕ್ಷ, ಮೂರ್ತಿ, ಪ್ರಕಾಶ್, ತಿಪ್ಪೇಸ್ವಾಮಿ, ಈಶ್ವರ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net