ಶ್ರೀಗಳ ಸದ್ಯೋಧನ ಪಾದಯಾತ್ರೆ ಇಂದು

ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖಾ  ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು.
ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖಾ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷರಾದ ಶ್ರೀಸದಾಶಿವ ಶಿವಾಚಾರ್ಯ ಮಹಾಸ್ವಾಮಿಗಳು.
Published on
ಆಲೂರು: ಶ್ರೀಮದ್ ರಂಭಾಪುರಿ ವೀರ ಸಿಂಹಾಸನ ಶಾಖಾ ಮಠ ಶ್ರೀ ಸಂಸ್ಥಾನ ಹಿರೇಮಠದ ಪೀಠಾಧ್ಯಕ್ಷ ಶ್ರೀ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಡಿ.14ರಂದು ಸದ್ಯೋಧನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಕಾರ್ಜುವಳ್ಳಿ ಕುಡಿಗೆಯಲ್ಲಿ ಪಂಚಾಚಾರ್ಯ ಧ್ವಜಾರೋಹಣ ನೆರವೇರಿಸಿ, ನಂತರ ಶಿವಾಚಾರ್ಯರರು ಪಾದಯಾತ್ರೆ ಪ್ರಾರಂಭಿಸಲಿದ್ದಾರೆ. ಪಾದಯಾತ್ರೆಯ ಮಾರ್ಗಮಧ್ಯೆ ಭಕ್ತರಿಗೆ ರುದ್ರಾಕ್ಷ, ವಿಭೂತಿ ಧಾರಣೆ, ಶ್ರೀ ಸಿದ್ಧಾಂತ ಶಿಖಾಮಣಿ ಗ್ರಂಥ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ವಿತರಣೆ ಮಾಡಲಾಗುವುದು. ಬೆಳಗ್ಗೆ 11 ಗಂಟೆಗೆ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಮುಂದೆ ಪಾದಯಾತ್ರೆ ಮುಕ್ತಾಯವಾಗಲಿದೆ. ನಂತರ ಶ್ರೀವೀರಭದ್ರ ಸ್ವಾಮಿ ದೇವಸ್ಥಾನದ ಬಳಿ ಪ್ರಸಾದ ವಿನಿಯೋಗವಿರುತ್ತದೆ. ಶ್ರೀ ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net