ಹೆಬ್ಬನಹಳ್ಳಿ, ಹರನಹಳ್ಳಿ ಬಳಿ ಕಾಡಾನೆಗಳ ಸಂಚಾರ

ಹರನಹಳ್ಳಿ ಬಳಿ ಕಾಡಾನೆ
ಹರನಹಳ್ಳಿ ಬಳಿ ಕಾಡಾನೆ
Published on
ಸಕಲೇಶಪುರ: ಸಕಲೇಶಪುರ ವಲಯ ವ್ಯಾಪ್ತಿಯ ಹೆಬ್ಬನಹಳ್ಳಿ ಹಾಗೂ ಹರನಹಳ್ಳಿ ಗ್ರಾಮಗಳ ಸಮೀಪ ಎರಡು ಕಾಡಾನೆಗಳು ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿ ಹೇಮಂತ್‌ಕುಮಾರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ನೀಡಿದರು.
ಗ್ರಾಮಗಳಲ್ಲಿ ಸಾರ್ವಜನಿಕರಿಗೆ ರಾತ್ರಿ ಹಾಗೂ ಮುಂಜಾನೆ ವೇಳೆಯಲ್ಲಿ ಅನಗತ್ಯವಾಗಿ ಹೊರಗೆ ಸಂಚರಿಸದಂತೆ, ಒಬ್ಬೊಬ್ಬರೆ ಓಡಾಡುವುದನ್ನು ತಪ್ಪಿಸಿ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದರು. ಕಾಡಾನೆಗಳು ಕಂಡುಬಂದಲ್ಲಿ ಅವುಗಳ ಸಮೀಪ ಹೋಗದೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿ, ಕಾಡಾನೆಗಳ ಚಲನವಲನದ ಬಗ್ಗೆ ನಿರಂತರ ನಿಗಾ ವಹಿಸಲಾಗಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್‌ಕುಮಾರ್‌ತಿಳಿಸಿದರು. ಗ್ರಾಮಸ್ಥರು ಆತಂಕಕ್ಕೆ ಒಳಗಾಗದೆ ಇಲಾಖೆಯ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net