ಸಂಕ್ರಾಂತಿ ಕೃಷಿ ಸಂಸ್ಕೃತಿ ಸಾರುವ ಹಬ್ಬ

- ಬೇಲೂರು ತಾಲೂಕು ಒಕ್ಕಲಿಗರ ಮಹಿಳಾ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತೀಗೌಡ, ಪುಣೆಯ ಹರಿಣಿ ಗಣೇಶ್ ಇತರರಿದ್ದರು
- ಬೇಲೂರು ತಾಲೂಕು ಒಕ್ಕಲಿಗರ ಮಹಿಳಾ ಸಂಘದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪುರಸಭೆ ಅಧ್ಯಕ್ಷೆ ಉಷಾ ಸತೀಶ್, ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತೀಗೌಡ, ಪುಣೆಯ ಹರಿಣಿ ಗಣೇಶ್ ಇತರರಿದ್ದರು
Published on

ಪ್ರಮುಖ ಮುಖ್ಯಾಂಶಗಳು

  • ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಅಭಿಮತ
ಬೇಲೂರು: ತಾಲೂಕು ಒಕ್ಕಲಿಗರ ಮಹಿಳಾ ಸಂಘದಿಂದ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಸಂಕ್ರಾಂತಿ ಸುಗ್ಗಿ ಸಂಭ್ರಮ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಪುಣ್ಯಸ್ಮರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಉದ್ಘಾಟಿಸಿದರು.
ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ, ಸಂಕ್ರಾಂತಿ ಹಬ್ಬವು ಕೃಷಿ ಸಂಸ್ಕೃತಿ ಹಾಗೂ ಶ್ರಮದ ಗೌರವವನ್ನು ಸಾರುತ್ತದೆ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಏಕತೆ ಹಾಗೂ ನಮ್ಮ ಸಂಸ್ಕೃತಿ, ಪರಂಪರೆಯ ಮೌಲ್ಯಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮತ್ತು ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಸಮಾಜಮುಖಿ ಸೇವೆ ಹಾಗೂ ಕುವೆಂಪು ಅವರ ಮಾನವೀಯ ಮೌಲ್ಯಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಿವೆ ಎಂದರು.
ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಭಾರತೀಗೌಡ ಮಾತನಾಡಿ, ಒಕ್ಕಲಿಗರ ಮಹಿಳಾ ಸಂಘವು ಸಮಾಜದ ಸಬಲೀಕರಣ, ಸಂಸ್ಕೃತಿ ಸಂರಕ್ಷಣೆ ಹಾಗೂ ಮಹಿಳೆಯರ ಏಳಿಗೆಗೆ ನಿರಂತರವಾಗಿ ಶ್ರಮಿಸುತ್ತಿದ್ದು, ಇಂತಹ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಒಗ್ಗಟ್ಟಿನ ಬಲವನ್ನು ಹೆಚ್ಚಿಸುತ್ತವೆ. ನಮ್ಮ ಸಂಘದ ಮೂಲಕ ಇನ್ನಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪುಣೆಯ ಹರಿಣಿ ಗಣೇಶ್ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಮನಸ್ಸಿನ ಶಾಂತಿ ಹಾಗೂ ಆತ್ಮಸ್ಥೈರ್ಯಕ್ಕೆ ಧ್ಯಾನ ಅತ್ಯಂತ ಅಗತ್ಯವಾಗಿದೆ. ಧ್ಯಾನದಿಂದ ಏಕಾಗ್ರತೆ ಹೆಚ್ಚುತ್ತದೆ ಜತೆಗೆ ಆರೋಗ್ಯವೂ ಸುಧಾರಿಸುತ್ತದೆ. ಪ್ರತಿದಿನ ಸ್ವಲ್ಪ ಸಮಯ ಧ್ಯಾನಕ್ಕೆ ಮೀಸಲಿಟ್ಟರೆ ವ್ಯಕ್ತಿತ್ವ ವಿಕಸನವಾಗುತ್ತದೆ. ವಿಶೇಷವಾಗಿ ಮಹಿಳೆಯರು ಧ್ಯಾನವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿ ಕೊಂಡರೆ ಕುಟುಂಬ ಮತ್ತು ಸಮಾಜ ಎರಡರಲ್ಲೂ ಸಕಾರಾತ್ಮಕ ಬದಲಾವಣೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಒಕ್ಕಲಿಗರ ಮಹಿಳಾ ಸಂಘದ ಗೌರವಾಧ್ಯಧ್ಯಕ್ಷೆ ಶ್ರೀದೇವಿ, ಉಪಾಧ್ಯಕ್ಷೆ ಮುದ್ದಮ್ಮ, ಕಾರ್ಯದರ್ಶಿ ಕವಿತಾ, ಖಜಾಂಚಿ ಉಷಾ, ಪುರಸಭೆ ಸದಸ್ಯೆ ಜಮೀಲಾ ತೌಫಿಕ್ ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net