ಮುಂದಿನ ಪೀಳಿಗೆಗೆ ಪರಿಸರ ಉಳಿಸಿ

ಅರಕಲಗೂಡು ತಾಲೂಕಿನ ಕೊಣನೂರಿನ ಉಳ್ಳೇನಹಳ್ಳಿ ನಳಂದ ಪಬ್ಲಿಕ್ ಶಾಲಾ ಆವರಣದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸಕೀನಾ, ದಿವ್ಯಾ ಇತರರಿದ್ದರು.
ಅರಕಲಗೂಡು ತಾಲೂಕಿನ ಕೊಣನೂರಿನ ಉಳ್ಳೇನಹಳ್ಳಿ ನಳಂದ ಪಬ್ಲಿಕ್ ಶಾಲಾ ಆವರಣದಲ್ಲಿ ಸಸಿ ನೆಟ್ಟು ವಿಶ್ವ ಪರಿಸರ ದಿನ ಆಚರಿಸಲಾಯಿತು. ಸಕೀನಾ, ದಿವ್ಯಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯ ಶಿಕ್ಷಕಿ ಸಕಿನಾ ಸಲಹೆ
ಅರಕಲಗೂಡು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಲೂಕಿನ ಕೊಣನೂರಿನ ಉಳ್ಳೇನಹಳ್ಳಿ ನಳಂದ ಪಬ್ಲಿಕ್ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಉಲ್ಲೇನಹಳ್ಳಿ ಹಾಗೂ ಬಿದರೂರು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದ ಆವರಣದಲ್ಲಿ ಸಸಿಗಳನ್ನು ನೆಟ್ಟರು.
ಮುಖ್ಯಶಿಕ್ಷಕಿ ಸಕಿನಾ ಮಾತನಾಡಿ, ಮನುಕುಲದ ಉಳಿವಿಗೆ ಹಾಗೂ ಮುಂದಿನ ಪೀಳಿಗೆಗೆ ಪರಿಸರ ಉಳಿಸಲು ಕಾಡು ಬೆಳೆಸಬೇಕಾಗಿದೆ. ಹೀಗಾಗಿ ಮಕ್ಕಳು ಶಿಕ್ಷಣದ ಜತೆಗೆ ಪರಿಸರ ಬೆಳವಣಿಗೆಗೆ ಆದ್ಯತೆ ನೀಡಬೇಕು. ಪರಿಸರದ ಮಹತ್ವದ ಜತೆಗೆ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದು ಅವಶ್ಯಕತೆ ಇದೆ ಎಂದು ಹೇಳಿದರು.
ಸಹ ಶಿಕ್ಷಕರಾದ ದಿವ್ಯಾ, ಜಗದೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net