ವಿದ್ಯಾರ್ಥಿಗಳಿಗೆ ಸೇವಾ ಮನೋಭಾವ ಮುಖ್ಯ

ಹಿರೀಸಾವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ರಾಮಕೃಷ್ಣ, ಕರಿಬಸಪ್ಪ, ನಿರ್ಮಲಾಕುಮಾರಿ ಇತರರಿದ್ದರು.
ಹಿರೀಸಾವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ರಾಮಕೃಷ್ಣ, ಕರಿಬಸಪ್ಪ, ನಿರ್ಮಲಾಕುಮಾರಿ ಇತರರಿದ್ದರು.
Published on
ಹಿರೀಸಾವೆ: ಜ್ಞಾನ ಶಿಸ್ತು, ನೈತಿಕತೆ ಮತ್ತು ಸೇವಾ ಮನೋಭಾವ ಬೆಳೆಸಿಕೊಂಡ ವಿದ್ಯಾರ್ಥಿಗಳು ಸಮಾಜದ ಅಮೂಲ್ಯ ಆಸ್ತಿಯಾಗುತ್ತಾರೆ ಎಂದು ನಿವೃತ್ತ ಉಪನ್ಯಾಸಕ ಸಿ.ಬಿ.ರಾಮಕೃಷ್ಣ ಹೇಳಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ 2006 2007ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಯಾಗಿದ್ದು ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪ್ರಾತ್ರ ವಹಿಸುತ್ತಾರೆ. ಉತ್ತಮ ಗುಣಗಳನ್ನು ಬೆಳೆಸಿಕೊಂಡಾಗ ಸಮಾಜದ ಆಸ್ತಿಯಾಗುತ್ತಾರೆ ಎಂದರು.
ಶಿಸ್ತು, ಸನ್ನಡತೆ, ಸಮಯ ಪಾಲನೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿ ವಿದ್ಯಾರ್ಥಿಗಳಿಗೆ ಮುಖ್ಯ. ಇದರೊಂದಿಗೆ ಸಾಮಾಜಿಕ ಸೇವೆ, ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರ, ಪರಿಸರ ಸಂರಕ್ಷಣೆ ಮುಂತಾದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ನಿವೃತ್ತ ಶಿಕ್ಷಕ ಪ್ರಕಾಶ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಪೂರಕವಾಗಿದ್ದರೆ ಅದನ್ನು ನೋಡುವ ಗುರು ಧನ್ಯನಾಗುತ್ತಾನೆ. ಒಬ್ಬ ಶಿಷ್ಯನ ಬಗ್ಗೆ ಸಮಾಜ ಸದಾ ಮೆಚ್ಚುಗೆ ಮಾತುಗಳನ್ನಾಡಿದರೆ ಅದನ್ನು ಕಾಣುವ ಗುರು ಧನ್ಯ ನಾಗುತ್ತಾನೆ ಎಂದರು.
ಹಳೆಯ ವಿದ್ಯಾರ್ಥಿಗಳು ಶಾಲಾ ದಿನಗಳ ಮಧುರ ನೆನಪುಗಳನ್ನು ಹಂಚಿಕೊಂಡರು. ನಿವೃತ್ತ ಶಿಕ್ಷಕರಾದ ಕರಿಬಸಪ್ಪ, ನಿರ್ಮಲಾ ಕುಮಾರಿ, ಹಳೆಯ ವಿದ್ಯಾರ್ಥಿಗಳಾದ ಬಾಳಗಂಚಿ ಗ್ರಾಪಂ ಮಾಜಿ ಅಧ್ಯಕ್ಷ ಗಂಗಾಧರ್, ಬ್ಯಾಂಕ್ ಸನ್ಮಾನ್, ಸುನಿಲ್, ವಿನಯ ಪ್ರಸಾದ್, ನಂದೀಶ್, ಲೋಕೇಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net