ಶನೈಶ್ಚರ ಸ್ವಾಮಿ ಜಯಂತ್ಯುತ್ಸವ

ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಂತೇನಹಳ್ಳಿಯ ಶ್ರೀ ಶನೈಶ್ಚರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಅರಸೀಕೆರೆ ಗ್ರಾಮಾಂತರ ತಾಲೂಕಿನ ಕಂತೇನಹಳ್ಳಿಯ ಶ್ರೀ ಶನೈಶ್ಚರ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
Published on
ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಂತೇನಹಳ್ಳಿ ಗ್ರಾಮದಲ್ಲಿ ಶನೈಶ್ವರ ಸ್ವಾಮಿ ಜಯಂತ್ಯುತ್ಸವ ಅಂಗವಾಗಿ ವಿಶೇಷ ಪೂಜೆಗಳು ದೇವಾಲಯದ ಸಂಪ್ರದಾಯದಂತೆ ನಡೆದವು.
ಸ್ವಾಮಿಯ ಮೂಲ ವಿಗ್ರಹಕ್ಕೆ ತೈಲಾಭಿಷೇಕ, ರುದ್ರಾಭಿಷೇಕ, ವಿವಿಧ ಅರ್ಚನೆಗಳು ನಡೆದವು. ಮತ್ತೊಂದೆಡೆ ದೇವಾಲಯದ ಆವರಣದಲ್ಲಿ ಗಣಪತಿ ಹೋಮ, ನವಗ್ರಹ ಹೋಮ, ಸುದರ್ಶನ ಚಂಡಿಕಾ ಹೋಮ ಜರುಗಿದವು. ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ದರ್ಶನ ಪಡೆದರು.
ದೇವಾಲಯದ ಪ್ರಧಾನ ಅರ್ಚಕ ಮುರಳಿ ಮಂದಾರ್ತಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net