ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ

  ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಪೇಟೆ ಶ್ರೀ ಕನ್ಯಕಾ ಪರಮೇಶ್ವರಿ ದೇಗುಲದಲ್ಲಿ 12 ಜ್ಯೋತಿರ್ಲಿಂಗಗಳನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿರುವ ಭಕ್ತರು.
ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ಪೇಟೆ ಶ್ರೀ ಕನ್ಯಕಾ ಪರಮೇಶ್ವರಿ ದೇಗುಲದಲ್ಲಿ 12 ಜ್ಯೋತಿರ್ಲಿಂಗಗಳನ್ನು ಪ್ರತಿಷ್ಠಾಪಿಸಿ ಪೂಜಿಸುತ್ತಿರುವ ಭಕ್ತರು.
Published on
ಬೇಲೂರು : ಮಹಾ ಶಿವರಾತ್ರಿ ಅಂಗವಾಗಿ ಪಟ್ಟಣದ ಪೇಟೆ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ 12 ಜ್ಯೋತಿರ್ಲಿಂಗಗಳನ್ನು ಪ್ರತಿಷ್ಠಾಪಿಸಿ ನೂರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ರಾತ್ರಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಹಬ್ಬದ ಅಂಗವಾಗಿ ದೇವಸ್ಥಾನದ ಆವರಣವನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಆರ್ಯವೈಶ್ಯ ಮಂಡಳಿ ಹಾಗೂ ವಾಸವಿ ವನಿತಾ ಸಂಘದಿಂದ ಮಹಾಶಿವರಾತ್ರಿ ಹಬ್ಬವನ್ನು ಶಿವರಾತ್ರಿಯ ಪುಣ್ಯಕಾಲದಲ್ಲಿ ಲೋಕ ಕಲ್ಯಾಣಾರ್ಥ ದೇವಸ್ಥಾನದಲ್ಲಿ 12 ಜ್ಯೋತಿರ್ಲಿಂಗಗಳ ಪೂಜೆಯನ್ನು ದೇವಸ್ಥಾನದ ಅರ್ಚಕರಾದ ರವಿ ಪುರೋಹಿತ್ ಲಿಂಗಗಳನ್ನು ಪ್ರತಿಷ್ಠಾಪಿಸಿ, ಶೋಡಷೋಪಚಾರ ಪೂಜೆ, ವಿಶೇಷ ಅಭಿಷೇಕ ಹಾಗೂ ಅಷ್ಟೋತ್ತರಗಳನ್ನು ನೆರವೇರಿಸಿದರು.
ಆರ್ಯವೈಶ್ಯ ಮಂಡಳಿ ಅಧ್ಯಕ್ಷ ಬಿ.ಡಿ.ಅಶೋಕ್ ಮಾತನಾಡಿ, ವಾಸವಿ ವನಿತಾ ಸಂಘವು ಆರ್ಯವೈಶ್ಯ ಮಹಿಳೆಯರ ಸಕ್ರಿಯ ಸಂಘಟನೆಯಾಗಿದ್ದು, ನಿರಂತರವಾಗಿ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಪ್ರತಿ ವರ್ಷವೂ ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಲೋಕ ಕಲ್ಯಾಣಾರ್ಥವಾಗಿ ಸೇವಾ ಮನೋಭಾವದಿಂದ ದೇವಾಲಯವು ಅಭಿವೃದ್ಧಿ ಹೊಂದುತ್ತಿದೆ ಎಂದರು.
ವಾಸವಿ ವನಿತಾ ಸಂಘದ ಅಧ್ಯಕ್ಷೆ ಜ್ಯೋತಿ ಮಾತನಾಡಿ, ಶಿವನು ಲಿಂಗರೂಪಿಯಾಗಿ ಪ್ರಕಟವಾದ ಹಾಗೂ ಶಿವ-ಪಾರ್ವತಿಯರ ಕಲ್ಯಾಣ ನಡೆದ ಈ ಪವಿತ್ರ ದಿನದಂದು ಉಪವಾಸ ಮತ್ತು ಜಾಗರಣೆಗೆ ವಿಶೇಷ ಮಹತ್ವವಿದೆ. ಇದು ನಮ್ಮೊಳಗಿನ ಅಜ್ಞಾನವನ್ನು ದೂರಮಾಡಿ ಸುಜ್ಞಾನದತ್ತ ಕೊಂಡೊಯ್ಯುವ ಹಾದಿಯಾಗಿದೆ ಎಂದರು.
ಆರ್ಯವೈಶ್ಯ ಮಂಡಳಿಯ ಕಾರ್ಯದರ್ಶಿ ಕೆ.ಎಲ್.ಸುಧೀಂದ್ರ, ಕನ್ಯಕಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಆರ್ಯವೈಶ್ಯ ಸಮುದಾಯದ ಮುಖಂಡರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net