ಚನ್ನಕೇಶವಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ಪೀಜೆ ಸಲ್ಲಿಸಿ ಪ್ರಾರ್ಥಿಸಿದ ಪಕ್ಷದ ಮುಖಂಡರು, ಅಭಿಮಾನಿಗಳು
ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ಪೀಜೆ ಸಲ್ಲಿಸಿ ಪ್ರಾರ್ಥಿಸಿದ ಪಕ್ಷದ ಮುಖಂಡರು, ಅಭಿಮಾನಿಗಳು
Published on
ಬೇಲೂರು: ಮಾಜಿ ಪ್ರಧಾನಿ ಹಾಗೂ ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರ 94ನೇ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು, ತಾಲೂಕು ಜೆಡಿಎಸ್ ಮುಖಂಡರು ಪಟ್ಟಣದ ಶ್ರೀ ಚನ್ನಕೇಶವಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರು ದೇಶ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರು. ಸರಳತೆ, ಪ್ರಾಮಾಣಿಕತೆ ಹಾಗೂ ರೈತರ ಪರ ಕಾಳಜಿಯಿಂದ ದೇಶದಲ್ಲೆ ಜನಮನ ಗೆದ್ದ ನಾಯಕರು. ಅವರ ರಾಜಕೀಯ ಜೀವನದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದರೂ ಸಾಮಾನ್ಯ ಜನರೊಂದಿಗೆ ಬೆರೆತು, ಯುವ ರಾಜಕಾರಣಿಗಳಿಗೆ ಪ್ರೇರಣೆಯಾಗಿದ್ದಾರೆ. ಅವರ ಹುಟ್ಟುಹಬ್ಬದ ಅಂಗವಾಗಿ ಚನ್ನಕೇಶವಸ್ವಾಮಿಗೆ ಪಕ್ಷದ ಮುಖಂಡರೆಲ್ಲ ಸೇರಿ ವಿಶೇಷ ಪೂಜೆ ಸಲ್ಲಿಸಿ, ದೇವೇಗೌಡರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಕೊಡಲಿ ಎಂದು ಪ್ರಾರ್ಥಿಸಿದ್ದೇವೆ ಎಂದರು.
ಹೆಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಮಾತನಾಡಿ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರು ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರು. ರೈತರು, ಬಡವರು ಹಾಗೂ ಜನ ಸಾಮಾನ್ಯರ ಪರವಾಗಿ ಸದಾ ಧ್ವನಿಯಾಗಿದ್ದು ಪ್ರತಿಯೊಬ್ಬರಿಗೂ ಆದರ್ಶವಾಗಿದ್ದಾರೆ. ಆದ್ದರಿಂದ ಅವರ ಹುಟ್ಟುಹಬ್ಬದ ಅಂಗವಾಗಿ ಚನ್ನಕೇಶವಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಒಳಿತಿಗಾಗಿ ದೇವರು ಅವರಿಗೆ ಇನ್ನಷ್ಟು ಆರೋಗ್ಯ, ಆಯಸ್ಸು ನೀಡಲಿ ಎಂದು ಪ್ರಾರ್ಥಿಸಿದ್ದೇವೆ. ಮುಂದಿನ ದಿನಗಳಲ್ಲಿಯೂ ಅವರ ಮಾರ್ಗದರ್ಶನ ರಾಜ್ಯ ಹಾಗೂ ದೇಶಕ್ಕೆ ಅಗತ್ಯವಾಗಿದೆ ಎಂದರು.
ಜಿಪಂ ಮಾಜಿ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಟಿಎಪಿಸಿಎಂಎಸ್ ಅದ್ಯಕ್ಷ ಮಲ್ಲೇಗೌಡ, ಪಿಎಲ್ ಡಿ ಬ್ಯಾಂಕ್ ಅದ್ಯಕ್ಷ ದಿನೇಶ್, ತಾಪಂ ಮಾಜಿ ಅಧ್ಯಕ್ಷರಾದ ಅಶ್ವಥ್, ಅಬ್ದುಲ್ ಸುಭಾನ್, ಮುಖಂಡರಾದ ಶ್ರೀವತ್ಸ, ದಿಲೀಪ್, ಬಲ್ಲೇನಹಳ್ಳಿ ರವಿಕುಮಾರ್, ಹರೀಶ್, ರಾಮು ಸೇರಿದಂತೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net