

ಹಾಸನ:
ನಗರದ ಹೊಸ ಲೈನ್ ರಸ್ತೆ ಪೊಲೀಸ್ ಕ್ವಾರ್ಟರ್ಸ್‌ನಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ 40ನೇ ವರ್ಷದ ಜಾತ್ರಾ ಮಹೋತ್ಸವ ಇತ್ತೀಚೆಗೆ ಅದ್ದೂರಿಯಾಗಿ ಜರುಗಿತು.
ಜವೇನಹಳ್ಳಿ ಮಠದಿಂದ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆಗೆ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರಸ್ವಾಮೀಜಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತಾ ಪೂಜೆ ಸಲ್ಲಿಸಿ ಚಾಲನೆ ನೀಡಿದರು.