ಹಾಸನ ಜಿಲ್ಲಾ ಉಪ ವಿಭಾಗಾಧಿಕಾರಿಗಳು ಮತ್ತು ಪುರಸಭೆ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್, ಎಎಸ್‌ಪಿ ಶ್ರೀನಿಧಿ, ತಹಸೀಲ್ದಾರ್ ವೈ.ಎಂ.ರೇಣುಕುಮಾರ್, ಡಿವೈಎಸ್‌ಪಿ ಮಹಮ್ಮದ್ ಹಸ್ಮತ್ ಖಾನ್, ಪುರಸಭೆ ಮುಖ್ಯಾಧಿಕಾರಿ ಯು.ಎನ್.ಶಿವ ಶಂಕರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಸಾರ್ವಜನಿಕರು, ಪೊಲೀಸ್ ಇಲಾಖೆ, ಗೃಹರಕ್ಷಕ ದಳದ ಸಿಬ್ಬಂದಿ, ಸ್ಕೌಟ್ಸ್ ಆ್ಯಂಡ್ ಗೈಡ್ ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಭಕ್ತಾಧಿಗಳಿಗೆ ತಾಲೂಕು ಆಡಳಿತದ ವತಿಯಿಂದ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.