ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ

ಹಾಸನ ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಭೋದ್ ಫೌಂಡೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನಶಾಮುಕ್ತ ಭಾರತ ಜಾಥಾಕ್ಕೆ ಸಂಸದ ಶ್ರೇಯಸ್ ಪಟೇಲ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ದಿಶಾ ಭೋದ್ ಫೌಂಡೇಶನ್ ನಿರ್ದೇಶಕ ಧೃವಕುಮಾರ್, ಎಎಸ್ಪಿ ಶ್ರೀನಿಧಿ ಮತ್ತತರರು ಉಪಸ್ಥಿತರಿದ್ದರು.
ಹಾಸನ ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಭೋದ್ ಫೌಂಡೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ನಶಾಮುಕ್ತ ಭಾರತ ಜಾಥಾಕ್ಕೆ ಸಂಸದ ಶ್ರೇಯಸ್ ಪಟೇಲ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ದಿಶಾ ಭೋದ್ ಫೌಂಡೇಶನ್ ನಿರ್ದೇಶಕ ಧೃವಕುಮಾರ್, ಎಎಸ್ಪಿ ಶ್ರೀನಿಧಿ ಮತ್ತತರರು ಉಪಸ್ಥಿತರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ
  • ಯುವಜನರಿಗೆ ಸಂಸದ ಶ್ರೇಯಸ್ ಪಟೇಲ್ ಸಲಹೆ
  • ನಶೆಮುಕ್ತ ಭಾರತ ಜಾಥಾಕ್ಕೆ ಚಾಲನೆ
ಹಾಸನ: ಗಾಂಜಾ, ಡ್ರಗ್ಸ್ ಸೇರಿದಂತೆ ವಿವಿಧ ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರ ಇರಬೇಕು ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಬುಧವಾರ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ದಿಶಾ ಬೋಧ್ ಫೌಂಡೇಶನ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ಆರೋಗ್ಯಕರ, ಸುರಕ್ಷಿತ ವಾತಾವರಣ ನಿರ್ಮಾಣ ಮಾಡುವುದು ಹಾಗೂ ನಶಾಮುಕ್ತ ಸಮಾಜವನ್ನು ಸ್ಥಾಪಿಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ತಿಳಿಸಿದರು. ಇಂದಿನ ಕಾಲಘಟ್ಟದಲ್ಲಿ 8-10 ವರ್ಷದ ಮಕ್ಕಳೇ ಡ್ರಗ್ಸ್‌ಗೆ ಬಲಿಯಾಗುತ್ತಿರುವುದು ದುರಂತವಾಗಿದೆ. ಭಗವಂತ ಕೊಟ್ಟ ಶಕ್ತಿಯನ್ನು ಸಮಾಜದ ಒಳಿತಿಗೆ ಬಳಸಿದಾಗ ಮಾತ್ರ ಜೀವನ ಸಾರ್ಥಕ್ಯವಾಗುತ್ತದೆ. ನಶಾಮುಕ್ತ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಶಾಸಕ ಎಚ್.ಪಿ. ಸ್ವರೂಪ್ ಮಾತನಾಡಿ, ನಶಾಮುಕ್ತ ಹಾಸನ ನಿರ್ಮಾಣಕ್ಕೆ ಯುವಜನರು
ಬೆಂಬಲಿಸಬೇಕು. ಇನ್ನೊಬ್ಬರ ಜೀವಕ್ಕೆ ನೆರವಾಗಲು ಅಂಗಾಂಗ ದಾನಕ್ಕೆ ಮುಂದಾಗಬೇಕು.
ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮಾತನಾಡಿ, ನಮ್ಮ ದೇಶದ ಪ್ರತಿಯೊಂದು ಕುಟುಂಬವೂ ನಶಾಮುಕ್ತವಾಗಿರಬೇಕು ಎಂಬ ಸಂಕಲ್ಪ ಮಾಡಬೇಕು. ದೇಶವನ್ನು ದುರ್ಬಲಗೊಳಿಸಲು ಶತ್ರುಗಳು ಯುದ್ಧ ಮಾಡಬೇಕಾಗಿಲ್ಲ. ನಶೆ ಹಬ್ಬಿಸಿದರೆ ಸಾಕು. ಜೀವನ ನಾಶ ಮಾಡಬಹುದು ಎಂದರು.
ದೇಶದ ಆರೋಗ್ಯವೂ ಮುಖ್ಯ:
ಹಳೇಬೀಡು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ವ್ಯಕ್ತಿಯ ಆರೋಗ್ಯದಷ್ಟೇ ದೇಶದ ಆರೋಗ್ಯವೂ ಅತಿಮುಖ್ಯ. ನನ್ನ ಆರೋಗ್ಯದ ಜತೆಗೆ ಇತರ ಆರೋಗ್ಯವನ್ನೂ ಕಾಪಾಡುತ್ತೇನೆ ಎಂಬ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಹೇಳಿದರು.ದಿಶಾ ಭೋದ್ ಫೌಂಡೇಶನ್ ನಿರ್ದೇಶಕ ಧೃವಕುಮಾರ್, ಎಎಸ್ಪಿ ಶ್ರೀನಿಧಿ ಮತ್ತಿತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net