ಅರಕಲಗೂಡು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಕ್ರಮ

ಅರಕಲಗೂಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಸಂಸದ ಶ್ರೇಯಸ್ ಪಟೇಲ್ ಭೂಮಿಪೂಜೆ ನೆರವೇರಿಸಿದರು. ಕೆ.ಸಿ.ಸೌಮ್ಯಾ, ನಾಗೇಂದ್ರ ಕುಮಾರ್ ಇತರರಿದ್ದರು.
ಅರಕಲಗೂಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಸಂಸದ ಶ್ರೇಯಸ್ ಪಟೇಲ್ ಭೂಮಿಪೂಜೆ ನೆರವೇರಿಸಿದರು. ಕೆ.ಸಿ.ಸೌಮ್ಯಾ, ನಾಗೇಂದ್ರ ಕುಮಾರ್ ಇತರರಿದ್ದರು.
Published on
ಅರಕಲಗೂಡು: ಇಲ್ಲಿನ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ವಹಿಸುವುದಾಗಿ ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಪಟ್ಟಣದ 3, 14 ಮತ್ತು 15ನೇ ವಾರ್ಡ್‌ನಲ್ಲಿ ಗುರುವಾರ 30 ಲಕ್ಷ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ವಾರ್ಡ್‌ಗಳಲ್ಲಿ ಮೂಲಸೌಕರ್ಯಗಳ ಕೊರತೆ ಇದ್ದ ಕಾರಣ ಸಮಾಜ ಕಲ್ಯಾಣ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡುವಂತೆ ಸಚಿವರಾಗಿದ್ದ ಎಚ್.ಸಿ.ಮಹದೇವಪ್ಪ ಅವರಲ್ಲಿ ಮನವಿ ಮಾಡಿದ್ದೆ. ಈ ಮೇರೆಗೆ ಅನುದಾನ ಮಂಜೂರು ಮಾಡಲಾಗಿದ್ದು ಇದೀಗ ರಸ್ತೆ ಅಭಿವೃದ್ಧಿಗೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪಟ್ಟಣದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲು ಕ್ರಮವಹಿಸಲಾಗಿದೆ ಎಂದರು.
ಪಟ್ಟಣ ಪಂಚಾಯಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಕೆಲವು ಮಾನದಂಡಗಳಿದ್ದು ಒಮ್ಮೆ ಪರಿಶೀಲಿಸಲಾಗಿದೆ. ಮತ್ತೊಮ್ಮೆ ಸರ್ಕಾರದ ಮಟ್ಟದಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಜೆಜೆಎಂ ಯೋಜನೆ ಕಾಮಗಾರಿಗೆ ಕೈಗೊಳ್ಳಲು ಸಾಕಷ್ಟು ಕಡೆ ಸುಸ್ಥಿತಿಯಲ್ಲಿದ್ದ ರಸ್ತೆಗಳನ್ನು ಅಗೆದು ಹಾಳು ಮಾಡಲಾಗಿದೆ. ಇಂಜಿನಿಯರ್ ಕೂಡ ತಲೆಕೆಡಿಸಿಕೊಳ್ಳುತ್ತಿಲ್ಲ. ಹಾಳಾದ ರಸ್ತೆಯನ್ನು ಗುತ್ತಿಗೆದಾರ ಸರಿಪಡಿಸಬೇಕು. ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಪಪಂ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ತಾಲೂಕು ಗ್ಯಾರಂಟಿ ಅನುನಷ್ಠಾನ ಸಮಿತಿ ಅಧ್ಯಕ್ಷ ಎಚ್.ಪಿ.ಶ್ರೀಧರ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಟಿ.ಸೋಮಶೇಖರ್, ಮುಖಂಡರಾದ ರಾಜೇಶ್, ಹರೀಶ್, ಲಿಂಗರಾಜು, ಚಂದ್ರಣ್ಣ, ಮಾದೇಶ್, ಗಣೇಶ್ ವೇಲಾಪುರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net