ಜನರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಕ್ರಮ

ತಾಲೂಕಿನ ಕೆಂಚಮ್ಮನ ಹೊಸಕೋಟೆಯ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕೆಂಚಾಂಬ ದೇವಸ್ಥಾನಕ್ಕೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದರು, ತಹಸೀಲ್ದಾರ್ ಮಲ್ಲಿಕಾರ್ಜುನ್, ಗೋವಿಂದ ರಾಜು, ರಾಮಸ್ವಾಮಿ, ಗೋಪಾಲ್ (ರಘು)  ಹಾಜರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಭರವಸೆ
  • ಶ್ರೀ ಕೆಂಚಾಂಬ ದೇವಸ್ಥಾನಕ್ಕೆ ಭೇಟಿ
ಆಲೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಹೇಳಿದರು.
ತಾಲೂಕಿನ ಕೆಂಚಮ್ಮನ ಹೊಸಕೋಟೆಯ ಹೋಬಳಿಯ ಹರಿಹಳ್ಳಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಕೆಂಚಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಪಡೆದ ಬಳಿಕ ಮಾತನಾಡಿದರು.
ಜಿಲ್ಲೆಯಲ್ಲಿ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ವರ್ಗದ ಜನರು ಹೆಚ್ಚಾಗಿದ್ದಾರೆ. ಅವರೆಲ್ಲರ ಆರ್ಥಿಕ ಬೆಳವಣಿಗೆ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಸವಲತ್ತುಗಳು ನಿಗದಿತ ಸಮಯಕ್ಕೆ ತಲುಪಿಸುವುದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಇದಕ್ಕೆ ಜನರು ಹಾಗೂ ಸಿಬ್ಬಂದಿ ಸಹಕಾರ ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ದಾಸೋಹ ಸಮಿತಿಯಿಂದ ಜಿಲ್ಲಾಧಿಕಾರಿಯನ್ನು ಸನ್ಮಾನಿಸಲಾಯಿತು.
ತಹಸೀಲ್ದಾರ್ ಮಲ್ಲಿಕಾರ್ಜುನ್, ಕೆಂಚಮ್ಮ ಹೊಸಕೋಟೆಯ ಹೋಬಳಿಯ ರಾಜಸ್ವ ನಿರೀಕ್ಷಕ ಗೋವಿಂದರಾಜು, ಕೆಂಚಾಂಬ ದೇವಸ್ಥಾನದ ಪ್ರಧಾನ ಅರ್ಚಕ ರಾಮಸ್ವಾಮಿ, ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಗೋಪಾಲ್ (ರಘು), ದಾಸೋಹ ಸಮಿತಿಯ ಸದಸ್ಯರಾದ ಕುಮಾರಸ್ವಾಮಿ, ಅಶೋಕ್, ಸತ್ಯನಾರಾಯಣ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net