ನಿರಂತರ ವಿದ್ಯುತ್ ಪೂರೈಸಲು ಕ್ರಮ

ಚನ್ನರಾಯಪಟ್ಟಣದ ಪಂಪ್ ಹೌಸ್‌ನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಅಳವಡಿಕೆಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಎಂ.ಆರ್.ಅನಿಲ್‌ಕುಮಾರ್, ಜಗದೀಶ್, ಕೃಷ್ಣ,  ರಮೇಶ್, ಪ್ರಶಾಂತ್ ಇತರರು ಇದ್ದರು.
ಚನ್ನರಾಯಪಟ್ಟಣದ ಪಂಪ್ ಹೌಸ್‌ನಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಅಳವಡಿಕೆಗೆ ಶಾಸಕ ಸಿ.ಎನ್.ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಎಂ.ಆರ್.ಅನಿಲ್‌ಕುಮಾರ್, ಜಗದೀಶ್, ಕೃಷ್ಣ, ರಮೇಶ್, ಪ್ರಶಾಂತ್ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿಕೆ
  • ಪಂಪ್‌ಹೌಸ್‌ಗೆ ಎಚ್.ಟಿ.ಕೇಬಲ್ ಅಳವಡಿಕೆ
ಚನ್ನರಾಯಪಟ್ಟಣ: ಯಾವುದೇ ಅಡಚಣೆಯಾಗದ ರೀತಿಯಲ್ಲಿ ನಿರಂತರ ವಿದ್ಯುತ್ ಪೂರೈಸಲು 85 ಲಕ್ಷ ರೂ. ವೆಚ್ಚದಲ್ಲಿ ಪಟ್ಟಣದ ಪಂಪ್‌ಹೌಸ್‌ಗೆ ಮೂರು ಪ್ರತ್ಯೇಕ ಲೈನ್‌ಗಳಾಗಿ ಎಚ್.ಟಿ.ಕೇಬಲ್ ಅಳವಡಿಕೆ ಮಾಡಲಾಗುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಮೈಸೂರು ರಸ್ತೆಯಲ್ಲಿನ ಪಂಪ್‌ಹೌಸ್ ಆವರಣದಲ್ಲಿ ಎಚ್.ಟಿ.ಕೇಬಲ್ ಅಳವಡಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. 
ತಾಲೂಕು ಕಚೇರಿ, ನೀರು ಸರಬರಾಜು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿನ ನಿರಂತರ ವಿದ್ಯುತ್ ಪೂರೈಕೆಗೆ ಅಡಚಣೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪ್ರತ್ಯೇಕ ಕೇಬಲ್ ಅಳವಡಿಸುವ ಮೂಲಕ ಬದಲಾವಣೆಗೆ ಮುಂದಾಗಿದ್ದೇವೆ. ಇದರಿಂದ ಬೇಸಿಗೆ ಮತ್ತು ಮಳೆಗಾಲದಲ್ಲೂ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ತಾಲೂಕಿನಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಸಲುವಾಗಿ 25 ಕೋಟಿ ರೂ. ವೆಚ್ಚದಲ್ಲಿ 50 ಲಿಂಕ್ ಲೈನ್ ಮಾಡಿಸಲಾಗಿದೆ ಎಂದರು.
ಟಿಎಪಿಸಿಎಂಎಸ್ ನಿರ್ದೇಶಕ ಎಂ.ಆರ್.ಅನಿಲ್‌ಕುಮಾರ್, ಜಗದೀಶ್, ಎಇಇ ಕೃಷ್ಣ, ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ರಮೇಶ್, ಗುತ್ತಿಗೆದಾರ ಪ್ರಶಾಂತ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net