ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಅಗತ್ಯ

ಆಲೂರು ಪಟ್ಟಣದ ಪಿ.ಎಂ.ಶ್ರೀ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾ ಉದ್ಘಾಟಿಸಿದರು. ಭಾಗ್ಯಮ್ಮ, ಸತೀಶ್, ಮೋಹನ್, ಸಿ.ಆರ್,ರಾಜು, ಮುರುಳಿ, ಜಯಂತಿ, ಶಾಂತಾ ಇತರರಿದ್ದರು.
ಆಲೂರು ಪಟ್ಟಣದ ಪಿ.ಎಂ.ಶ್ರೀ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾ ಉದ್ಘಾಟಿಸಿದರು. ಭಾಗ್ಯಮ್ಮ, ಸತೀಶ್, ಮೋಹನ್, ಸಿ.ಆರ್,ರಾಜು, ಮುರುಳಿ, ಜಯಂತಿ, ಶಾಂತಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾ ಹೇಳಿಕೆ
  • ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ
ಆಲೂರು: ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಆದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ನಿಸಾರ್ ಫಾತಿಮಾ ಹೇಳಿದರು.
ಪಟ್ಟಣದ ಪಿ.ಎಂ.ಶ್ರೀ ನೂತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಫೆ.10 ರಿಂದ ತಾಲೂಕಿನ ಎಲ್ಲ ಅಂಗನವಾಡಿಗಳು, ಶಾಲೆ-ಕಾಲೇಜುಗಳಲ್ಲಿ ಉಚಿತವಾಗಿ ಜಂತು ಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪಾಲಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು. ಪ್ರತಿ ವರ್ಷ ಜಂತುಹುಳು ನಿವಾರಣಾ ಮಾತ್ರೆಯನ್ನು ಎರಡು ಬಾರಿ ಮಕ್ಕಳಿಗೆ ನೀಡುವುದರಿಂದ ಮಕ್ಕಳನ್ನು ಜಂತುಹುಳು ಸೋಂಕಿನಿಂದ ಪಾರು ಮಾಡಬಹುದು ಎಂದು ತಿಳಿಸಿದರು.
ಪಿ.ಎಂ.ಶ್ರೀ ಶಾಲೆಯ ಮುಖ್ಯ ಶಿಕ್ಷಕ ಬೋಪಾಲಯ್ಯ ಮಾತನಾಡಿ, ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದರಿಂದ ಊಟಕ್ಕೆ ಮೊದಲು ಮತ್ತು ಶೌಚಗೃಹ ಬಳಸಿದ ನಂತರ ಸಾಬೂನಿನಿಂದ ಕೈ ತೊಳೆಯುವುದು, ಶುದ್ಧ ನೀರು ಕುಡಿಯುವುದು, ಆಹಾರವನ್ನು ಚೆನ್ನಾಗಿ ಬೇಯಿಸುವುದರಿಂದ, ಕೈ ಉಗುರುಗಳನ್ನು ನಿಯಮಿತವಾಗಿ ಕತ್ತರಿಸುವುದರಿಂದ, ಹಣ್ಣು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಉಪಯೋಗಿಸುವುದರಿಂದ ಜಂತುಹುಳುಗಳ ಬಾಧೆ ನಿಯಂತ್ರಿಸಬಹುದಾಗಿದೆ. ಊಟದ ನಂತರ ಮಾತ್ರೆಗಳನ್ನು ಅಗಿದು ತಿಂದು ನೀರು ಕುಡಿಯುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಯೋಜಕರಾದ ರವಿಕಿರಣ್ ಮಾತನಾಡಿ, ಈ ಕಾರ್ಯಕ್ರಮವು ಅತ್ಯಂತ ಉತ್ತಮ ಕಾರ್ಯಕ್ರಮವಾಗಿದ್ದು, ಜಂತುಹುಳು ನಿವಾರಣಾ ಮಾತ್ರೆಯನ್ನು ವರ್ಷಕ್ಕೆ 2 ಬಾರಿ ನೀಡುವುದರಿಂದ ಶಾಲಾ ಮಕ್ಕಳ ರಕ್ತಹೀನತೆ. ಅಪೌಷ್ಟಿಕತೆ ಹಾಗೂ ಶೈಕ್ಷಣಿಕ ಹಿಂದುಳಿಯುವುದರಿಂದ ಪಾರು ಮಾಡಬಹುದು ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಭಾಗ್ಯಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸತೀಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮೋಹನ್, ಸಿ.ಆರ್,ರಾಜು, ಮುರುಳಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಜಯಂತಿ, ಶಾಂತ, ಶಿಕ್ಷಕರು ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net