ನೇಣು ಬಿಗಿದುಕೊಂಡು ಆತ್ಮಹತ್ಯೆ

 ನೇಣು ಬಿಗಿದುಕೊಂಡು ಆತ್ಮಹತ್ಯೆ
ನೇಣು ಬಿಗಿದುಕೊಂಡು ಆತ್ಮಹತ್ಯೆ
Published on

ಬೇಲೂರು:

ತಾಲೂಕಿನ ಬಳ್ಳೂರು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಟ್ಟಡದ ಆವರಣದಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೇರಿಗೆ ಹಾಲು ಹಾಕಲು ಬಂದ ಸಾರ್ವಜನಿಕರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಕಂಡುಬಂದಿದೆ. ತಕ್ಷಣವೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನಿಗೆ ಸುಮಾರು 40 ವರ್ಷವಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಆತನ ಹೆಸರು, ಊರು ಹಾಗೂ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net